Thursday, September 16, 2021
No menu items!
Home Karnataka ಐಎಂಎ ಬಹುಕೋಟಿ ವಂಚನೆ ಪ್ರಕರಣ: ಪರಪ್ಪನ ಅಗ್ರಹಾರ ಸೇರಿದ ಮಾಜಿ ಶಾಸಕ ರೋಷನ್ ಬೇಗ್

ಐಎಂಎ ಬಹುಕೋಟಿ ವಂಚನೆ ಪ್ರಕರಣ: ಪರಪ್ಪನ ಅಗ್ರಹಾರ ಸೇರಿದ ಮಾಜಿ ಶಾಸಕ ರೋಷನ್ ಬೇಗ್

ಬೆಂಗಳೂರು: ರಾಜ್ಯಾದ್ಯಂತ ಭಾರೀ ಬಿರುಗಾಳಿ ಎಬ್ಬಿಸಿದ್ದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಬಂಧಿಸಿದ್ದು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಂಗಳೂರಿನ ಸಂಜಯ್‌ನಗರದ ಸಿಬಿಐ ಕಚೇರಿಯಲ್ಲಿ ರೋಷನ್‌ ಬೇಗ್‌ ಅವರನ್ನು ಭಾನುವಾರ ಬೆಳಗ್ಗೆ 11 ಗಂಟೆಯಿಂದ ವಿಚಾರಣೆ ನಡೆಸಿದ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಸಿಬಿಐ ಅಧಿಕಾರಿಗಳು ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಐಎಂಎ ಅಧ್ಯಕ್ಷ ಮನ್ಸೂರ್ ಖಾನ್ ನಿಂದ ನೂರಾರು ಕೋಟಿ ರೂಪಾಯಿಯನ್ನು ರೋಷನ್ ಬೇಗ್ ಪಡೆದುಕೊಂಡಿದ್ದಾರೆ ಎಂಬ ಆರೋಪವಿದೆ. ಹಣವಷ್ಟೇ ಅಲ್ಲ, ಐಷಾರಾಮಿ ಕಾರುಗಳೂ ಸೇರಿದಂತೆ ಇನ್ನಿತರ ದುಬಾರಿ ಬೆಲೆಯ ಉಡುಗೊರೆಗಳನ್ನೂ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ.

ಸದ್ಯ, ಮಾಜಿ ಸಚಿವ ರೋಷನ್ ಬೇಗ್ ರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಕೋರ್ಟ್ ಆದೇಶದ ಬಳಿಕ ಸಿಬಿಐ ಅಧಿಕಾರಿಗಳು ರೋಷನ್ ಬೇಗ್ ರನ್ನು ಜೈಲಿಗೆ ಕರೆದುಕೊಂಡು ಬಂದು ಜೈಲಿನ ಅಧಿಕಾರಿಗಳಿಗೆ ಒಪ್ಪಿಸಿ ವಾಪಸ್ ಹೊರಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರೋಷನ್ ಬೇಗ್ ರನ್ನು ಜೈಲಿನ ಕ್ವಾರಂಟೈನ್ ಸೆಲ್ ಗೆ ಶಿಫ್ಟ್ ಮಾಡಲಾಗಿದ್ದು, ಅವರು 14 ದಿನ ಕ್ವಾರಂಟೈನ್ ಸೆಲ್ ನಲ್ಲಿರಲಿದ್ದಾರೆ

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments