Tuesday, October 26, 2021
No menu items!
Home Latest ಭಾರತ- ಆಸ್ಟ್ರೇಲಿಯಾ ಏಕದಿನ ಸರಣಿ; ಮೊದಲ ಪಂದ್ಯದಲ್ಲಿ ಮುಗ್ಗರಿಸಿದ ಕೊಹ್ಲಿ ಬಾಯ್ಸ್

ಭಾರತ- ಆಸ್ಟ್ರೇಲಿಯಾ ಏಕದಿನ ಸರಣಿ; ಮೊದಲ ಪಂದ್ಯದಲ್ಲಿ ಮುಗ್ಗರಿಸಿದ ಕೊಹ್ಲಿ ಬಾಯ್ಸ್

ಸಿಡ್ನಿ: ಕೋವಿಡ್ 19 ನಂತರ ಭಾರತ ಕ್ರಿಕೆಟ್ ತಂಡ ಮೊದಲ ಅಂತರರಾಷ್ಟ್ರೀಯ ಪಂದ್ಯವನ್ನಾಡಿದ್ದು ಮೊದಲ ಪಂದ್ಯದಲ್ಲಿ ಮುಗ್ಗರಿಸಿದೆ. ಸಿಡ್ನಿಯಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಪ್ರವಾಸಿ ಭಾರತ ತಂಡವನ್ನು ಅತಿಥೇಯ ಆಸ್ಟ್ರೇಲಿಯಾ ತಂಡ 66 ರನ್ ಗಳ ಮೂಲಕ ಮಣಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಪರ ನಾಯಕ ಆಯರೋನ್ ಫಿಂಚ್ ಮತ್ತು ಸ್ಟೀವೆನ್ ಸ್ಮಿತ್ ಭರ್ಜರಿ ಶತಕ ಗಳಿಸಿದರೆ, ಸ್ಫೋಟಕ ಬ್ಯಾಟ್ಸಮನ್ ಡೇವಿಡ್ ವಾರ್ನರ್ ಆರ್ಧ ಶತಕ ಗಳಿಸಿ ಆಸಿಸ್ ಬೃಹತ್ ಮೊತ್ತಕ್ಕೆ ಕಾರಣರಾದರು. ಆ ಮೂಲಕ ಫಿಂಚ್ ಪಡೆ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 374 ರನ್ ಗಳಿಸಿತು.

ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಅಸ್ಟ್ರೇಲಿಯಾ ನೀಡಿದ್ದ 375 ರನ್‌ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಮಯಾಂಕ್ ಅಗರ್‌ವಾಲ್ ಹಾಗೂ ಶಿಖರ್ ಧವನ್ ಜೋಡಿ 53 ರನ್‌ಗಳ ಜತೆಯಾಟ ನಿಭಾಯಿಸಿತು. 22 ರನ್ ಬಾರಿಸಿ ಮಯಾಂಕ್ ವೇಗಿ ಹೇಜಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ವಿರಾಟ್ ಕೊಹ್ಲಿ(21) ಶ್ರೇಯಸ್ ಅಯ್ಯರ್ ಹಾಗೂ ಕೆ.ಎಲ್ ರಾಹುಲ್(12) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಲು ವಿಫಲರಾದರು

ಮತ್ತೊಂದೆಡೆ ಸ್ಪೋಟಕ ಬ್ಯಾಟಿಂಗ್ ಮೂಲಕ ಆಸ್ಟ್ರೇಲಿಯಾ ಬೌಲರುಗಳನ್ನು ದಂಡಿಸಿದ ಹಾರ್ದಿಕ್ ಪಾಂಡ್ಯ ಚೊಚ್ಚಲ ಶತಕ ಸಿಡಿಸುವ ಸನಿಹದಲ್ಲಿ ಎಡವಿದರು. 75 ಎಸೆತಗಳಲ್ಲಿ 90 ರನ್ ಬಾರಿಸಿದ್ದ ವೇಳೆ ಝಂಪಾ ಎಸೆತದಲ್ಲಿ ಬಿಗ್ ಹಿಟ್​ಗೆ ಮುಂದಾಗಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿದರು. ಈ ಅಮೋಘ ಇನಿಂಗ್ಸ್​ನಲ್ಲಿ ಪಾಂಡ್ಯ ಬ್ಯಾಟ್​ನಿಂದ 7 ಬೌಂಡರಿ ಹಾಗೂ 4 ಸಿಕ್ಸರ್​ಗಳು ಮೂಡಿಬಂದಿತ್ತು.

ಅಂತಿಮವಾಗಿ ಆಸೀಸ್ ನೀಡಿದ 375 ರನ್ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 8 ವಿಕೆಟ್ ನಷ್ಟಕ್ಕೆ 308 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮೂರು ಏಕದಿನ ಸರಣಿಯಲ್ಲಿ 1-0 ಅಂತರದಿಂದ ಪ್ರವಾಸಿ ಭಾರತ ತಂಡ ಹಿನ್ನಡೆ ಅನುಭವಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments