Friday, September 24, 2021
No menu items!
Home Bharata ದೇಶದಲ್ಲಿ 89 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ ; 24 ಗಂಟೆಗಳಲ್ಲಿ 38,617...

ದೇಶದಲ್ಲಿ 89 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ ; 24 ಗಂಟೆಗಳಲ್ಲಿ 38,617 ಹೊಸ ಪ್ರಕರಣ

ನವದೆಹಲಿ : ದೇಶಾದ್ಯಂತ ಕಿಲ್ಲರ್ ಕೊರೋನಾ ತನ್ನ ಹಾವುಏಣಿ ಆಟ ಮುಂದುವರೆಸಿದೆ. ಇಂದು ಬೆಳಿಗ್ಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 38,617 ಹೊಸ ಕೊರೋನಾ ಪ್ರಕರಣಗಳು ಕಂಡು ಬಂದಿದ್ದು 474 ಮಂದಿ ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 89,12,908 ತಲುಪಿದ್ದು, ಈ ಪೈಕಿ 1,30,993 ಮಂದಿ ಮೃತಪಟ್ಟಿದ್ದಾರೆ.ಕಳೆದ 24 ಗಂಟೆಗಳಲ್ಲಿ 44,739 ಮಂದಿ ಗುಣಮುಖರಾಗಿದ್ದು, ಒಟ್ಟು 83,35,110 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 9,37,279 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,74,80,186 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ಇದರ ನಡುವೆ ನಿನ್ನೆ ಒಂದೇ ದಿನ 44,739 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದು, ದೇಶದಲ್ಲಿ ಈವರೆಗೂ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 83,35,110ಕ್ಕೆ ಏರಿಕೆಯಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments