Tuesday, August 3, 2021
No menu items!
Home Bharata ಕೋಮು ಪ್ರಚೋದನಕಾರಿ ಟ್ವೀಟ್ ;ನಟಿ ಕಂಗನಾ ರಣಾವತ್ ಗೆ ಮಧ್ಯಂತರ ಜಾಮೀನು

ಕೋಮು ಪ್ರಚೋದನಕಾರಿ ಟ್ವೀಟ್ ;ನಟಿ ಕಂಗನಾ ರಣಾವತ್ ಗೆ ಮಧ್ಯಂತರ ಜಾಮೀನು

ಮುಂಬೈ: ಕೋಮು ಪ್ರಚೋದನಕಾರಿ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ವಿರುಧ್ಧ ಮುಂಬೈ ಪೋಲಿಸರು ಎಫ್ಐಆರ್ ದಾಖಲು ಮಾಡಿದ್ದರು. ಈ ವಿಚಾರವಾಗಿ ಕೋರ್ಟ್ ಮೆಟ್ಟಿಲೇರಿದ ಕಂಗನಾ ರಣಾವತ್ ಮತ್ತು ಆಕೆಯ ಸಹೋದರಿಗೆ ಮುಂಬೈ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು ಮಧ್ಯಂತರ ಜಾಮೀನು ನೀಡಿದೆ.

ಸಮುದಾಯಗಳ ನಡುವೆ ದ್ವೇಷ ವನ್ನು ಉತ್ತೇಜಿಸುವ ಟ್ವೀಟ್ ಮಾಡಿ ಕಂಗನಾ ಸುದ್ದಿಯಾಗಿದ್ದರು. ಇನ್ನು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಯ್ಯದ್ ಎಂಬುವವರು, ಕಂಗನಾ ತಮ್ಮ ಆಕ್ಷೇಪಾರ್ಹ ಪೋಸ್ಟ್ಗಳು ಮತ್ತು ಕಮೆಂಟ್ಗಳ ಮೂಲಕ ಹಿಂದೂ ಮತ್ತು ಮುಸ್ಲಿಂ ಸಮುದಾಯದವರ ನಡುವೆ ವಿಭಜನೆಯನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.

ಈ ದೂರನ್ನು ಗಂಭೀರವಾಗಿ ಪರಿಗಣಿಸಿದ್ದ ಮುಂಬೈ ಪೊಲೀಸರು ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ಮೇಲೆ ದೇಶದ್ರೋಹ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದರು.ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶಪೂರ್ವಕ ಕೃತ್ಯಗಳು) ಮತ್ತು 124 (ದೇಶದ್ರೋಹ), 34ರ (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸಿದ್ದ ನಟಿ ಕಂಗನಾ ರಣಾವತ್​ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂಡೇಲ್​ ಅವರಿಗೆ ಮುಂಬೈ ಹೈಕೋರ್ಟ್​ ಇಂದು ಮಧ್ಯಂತರ ಚಾಮೀನು ನೀಡಿ ಆದೇಶಿಸಿದೆ. ಆದರೆ, ಅವರ ವಿರುದ್ಧ ದಾಖಲಾಗಿರುವ ಕೋಮುದ್ವೇಷ ಮತ್ತು ದೇಶದ್ರೋಹ ಪ್ರಕರಣಗಳಿಗೆ ಸಭಂದಿಸಿದಂತೆ ಜನವರಿ 8 ರಂದು ಮುಂಬೈ ಪೊಲೀಸರ ಎದುರು ಹಾಜರಾಗುವಂತೆ ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎಂ.ಎಸ್. ಕಾರ್ನಿಕ್ ಅವರ ವಿಭಾಗೀಯ ಪೀಠವು ಸೂಚನೆ ನೀಡಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments