Saturday, December 4, 2021
No menu items!
Home Bharata ಐಪಿಎಲ್ ;ರಾಜಸ್ಥಾನ್ ರಾಯಲ್ಸ್ ಗೆ ಸವಾಲೊಡ್ಡಲಿದೆಯಾ ಹೈದ್ರಾಬಾದ್ ..?

ಐಪಿಎಲ್ ;ರಾಜಸ್ಥಾನ್ ರಾಯಲ್ಸ್ ಗೆ ಸವಾಲೊಡ್ಡಲಿದೆಯಾ ಹೈದ್ರಾಬಾದ್ ..?

ದುಬೈ : ಈ ಬಾರಿಯ ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯ ರೋಚಕ ಹಂತ ತಲುಪಿದ್ದು ,ಪ್ಲೇ ಆಫ್ ಹಂತದ ಗೆಲುವಿಗಾಗಿ ಎಲ್ಲಾ ತಂಡಗಳು ತಮ್ಮ ಶಕ್ತಿ ಮೀರಿ ಪ್ರದರ್ಶನ ತೋರಿಸುತ್ತಿವೆ. ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದ್ರಾಬಾದ್ ತಂಡಗಳು ಮುಖಾಮುಖಿಯಾಗಲಿದ್ದು ಎರಡೂ ತಂಡಗಳಿಗೂ ಗೆದ್ದರಷ್ಟೇ ಮುಂದಿನ ಹಾದಿ ಸುಗಮವಾಗಲಿದೆ.

ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಆಡಿರುವ 9 ಪಂದ್ಯಗಳಲ್ಲಿ ಕೇವಲ 3ರಲ್ಲಷ್ಟೇ ಗೆದ್ದು ಅಂಕಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದರೆ , ಸ್ಮಿತ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಆಡಿರುವ 10 ಪಂದ್ಯಗಳಲ್ಲಿ 4 ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 6 ನೇ ಸ್ಥಾನದಲ್ಲಿದೆ. ಅದುದರಿಂದ ಇಂದಿನ ಪಂದ್ಯ ಉಭಯ ತಂಡಗಳಿಗೂ ಮಹತ್ವದಾಗಿದ್ದು ಪ್ಲೇ ಆಫ್ ಹಂತ ತಲುಪಬೇಕಾದರೆ ಇಂದಿನ ಪಂದ್ಯ ಗೆಲ್ಲಲೇಬೇಕಾದ ಇಕ್ಕಟ್ಟಿನಲ್ಲಿ ಸಿಲುಕಿವೆ

ಮೊದಲು ಲಯದಲ್ಲಿದ್ದಸಂಜು ಸ್ಯಾಮ್ಸನ್ ಬ್ಯಾಟ್ ನಿಂದ ಇತ್ತೀಚೆಗೆ ರನ್ ಬರದೇ ಇರುವುದು ಸ್ಮಿತ್ ತಂಡಕ್ಕೆ ತಲೆನೋವಾಗಿದ್ದು, ಉಳಿದಂತೆ ಉತ್ತಪ್ಪ, ಬೆನ್ ಸ್ಟೋಕ್, ನಾಯಕ ಸ್ಮಿತ್ ತಮ್ಮ ಲಯವನ್ನು ಕಳೆದುಕೊಳ್ಳದೇ ಇದ್ದರೆ ರಾಯಲ್ಸ್ ಗೆ ಗೆಲುವು ಕಷ್ಟವಲ್ಲ. ಇನ್ನು ಕಳೆದ ಪಂದ್ಯದಲ್ಲಿ ಜೋಸ್ ಬಟ್ಲರ್ ಅರ್ಧಶತಕ ದಾಖಲಿಸಿರುವುದು ಸ್ಮಿತ್ ಬಳಗಕ್ಕೆ ಪಾಸಿಟಿವ್ ಎನರ್ಜಿ ತಂದುಕೊಟ್ಟಿದೆ.

ಇನ್ನು ಡೇವಿಡ್‌ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದ್ರಾಬಾದ್ ತಂಡದಲ್ಲಿ ಬೌಲರ್‌ ಭುವನೇಶ್ವರ್ ಕುಮಾರ್ ಅಲಭ್ಯವಾಗಿರುವುದು ಕೊಂಚ ಸಮಸ್ಯೆಯಾಗಿದೆ. ಆದ್ದರಿಂದ ವಿಜಯ್ ಶಂಕರ್ ಮತ್ತು ರಶೀದ್ ಖಾನ್ ಅವರ ಮೇಲೆ ಭಾರ ಹೆಚ್ಚಾಗಿದೆ. ಉಳಿದಂತೆ ಬ್ಯಾಟಿಂಗ್‌ ನಲ್ಲಿ ನಾಯಕ ಡೇವಿಡ್ ವಾರ್ನರ್ ,ಮನೀಶ್ ಪಾಂಡೆ, ಕೇನ್ ವಿಲಿಯಮ್ಸ್ ಸನ್, ಜಾನಿ ಬೆಸ್ಟೋ ರಂತಹ ಉತ್ತಮ ಬ್ಯಾಟ್ಸ್‌ಮನ್‌ ಗಳಿದ್ದು ಯಾವ ತಂಡ ವಿಜಯಶಾಲಿಯಾಗಲಿದೆ ಎಂಬುದನ್ನ ಕಾದು ನೋಡಬೇಕಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments