Monday, September 27, 2021
No menu items!
Home Bharata ಐಪಿಲ್ ಟಿ-20; 3 ಬಾರಿಯ ಚಾಂಪಿಯನ್ 'ಚೆನ್ನೈ ' ಗಿಂದು ಲಾಸ್ಟ್ ಛಾನ್ಸ್…?

ಐಪಿಲ್ ಟಿ-20; 3 ಬಾರಿಯ ಚಾಂಪಿಯನ್ ‘ಚೆನ್ನೈ ‘ ಗಿಂದು ಲಾಸ್ಟ್ ಛಾನ್ಸ್…?

ಶಾರ್ಜಾ ;ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಹಿಂದೆದೂ ತೋರದ ಕಳಪೆ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್‌ ಕಿಂಗ್ಸ್ ಇಂದು ಪ್ರಸ್ತುತ ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಬಲಾಢ್ಯ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

3 ಬಾರಿಯ ಚಾಂಪಿಯನ್ , 5 ಸಲದ ಫೈನಲಿಸ್ಟ್ , ಎಂ.ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್ ಈ ಬಾರಿಯ ಐಪಿಎಲ್ ನಲ್ಲಿ ಹೀನಾಯ ಪ್ರದರ್ಶನ ತೋರುತ್ತಿದ್ದು ಆಡಿರುವ 10 ಪಂದ್ಯಗಳಲ್ಲಿ ಕೇವಲ 3 ರಲ್ಲಷ್ಟೇ ಜಯಗಳಿಸಿ ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದಿದೆ. ಇನ್ನು ತಂಡವನ್ನು ಮೇಲೆತ್ತಬೇಕಾದರೆ ಉಳಿದಿರುವ ಎಲ್ಲಾ ಪಂದ್ಯಗಳಲ್ಲಿ ಉತ್ತಮ ರನ್ ರೇಟ್ ನೊಂದಿಗೆ ಜಯಗಳಿಸಿದರೆ ಫ್ಲೇ ಆಫ್ ಹಂತ ತಲುಪಲು ಸಾಧ್ಯವಿದೆ ಎನ್ನುತ್ತಾರೆ ಕ್ರಿಕೆಟ್‌ ತಜ್ಞರು .

ಇತ್ತ ಭರ್ಜರಿ ಫಾರ್ಮ್ ನಲ್ಲಿರುವ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಟೀಂ ಆಡಿರುವ 9 ಪಂದ್ಯಗಳಲ್ಲಿ 6ರಲ್ಲಿ ಜಯಗಳಿಸಿ 12 ಪಾಯಿಂಟ್ಸ್ ಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ಗೆದ್ದರೆ ,ರೋಹಿತ್ ಶರ್ಮಾ ಟೀಂ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಮುಂಬೈ ಇಂಡಿಯನ್ಸ್ ತಂಡ ಇಂದಿನ ಪಂದ್ಯ ಗೆದ್ದರೆ ಚೆನ್ನೈ ಸೂಪರ್ ಕಿಂಗ್ಸ್ ಗಂಟು ಮೂಟೆ ಕಟ್ಟಲೇ ಬೇಕಾಗುತ್ತದೆ.

ಆದುದರಿಂದ ಧೋನಿ ಟೀಂ ಗೆ ಇಂದಿನ ಪಂದ್ಯ ಮಹತ್ವದಾಗಿದ್ದು ಗೆಲ್ಲಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಡೇನ್ ಬ್ರಾವೋ ತಂಡದಿಂದ ಹೊರಗುಳಿದಿರುವವುದರಿಂದ ಇಮ್ರಾನ್ ತಾಹೀರ್ ಕಣಕ್ಕಿಳಿಯುವ ಸಾಧ್ಯತೆಯಿಂದೆ. ಆರಂಭದಲ್ಲಿ ಅಬ್ಬರಿಸಿದ್ದ ಪಾಪ್ ಡುಪ್ಲೆಸಿಸ್ ಕೂಡಾ ಇದೀಗ ಮಂಕಾಗಿದ್ದು, ಧೋನಿ , ಅಂಬಟಿ ರಾಯುಡು ಕೂಡಾ ಬ್ಯಾಟಿಂಗ್‌ ವೈಫಲ್ಯ ಕಾಣುತ್ತಿದ್ದಾರೆ.ಮಾಡು ಇಲ್ಲವೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಯಾವ ರೀತಿಯ ಪ್ರದರ್ಶನ ತೋರಲಿದೆ ಎಂಬುದನ್ನ ಕಾದು ನೋಡಬೇಕಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments