Wednesday, June 16, 2021
No menu items!
Home Bharata ಇಸ್ರೋದ PSLV-C49 ಉಡಾವಣೆ ಯಶಸ್ವಿ

ಇಸ್ರೋದ PSLV-C49 ಉಡಾವಣೆ ಯಶಸ್ವಿ

ಪ್ರಸ್ತುತ ವರ್ಷದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಡೆಸಿದ ಮೊದಲ ಮಿಷನ್ PSLV-C49 ಭೂ ವೀಕ್ಷಣಾ ಉಪಗ್ರಹವನ್ನು ಇಂದು ಮದ್ಯಾಹ್ನ 3.12 ಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಭೂ ವೀಕ್ಷಣಾ ಉಪಗ್ರಹ ಇಒಎಸ್-01 ಸೇರಿದಂತೆ 10 ಉಪಗ್ರಹಗಳನ್ನು ಹೊತ್ತಿದ್ದ ಪಿಎಸ್ಎಲ್ ವಿ ಸಿ49 ಯಶಸ್ವಿ ಉಡಾವಣೆಯಾಗಿದೆ.

ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ ಇಂದು ಮಧ್ಯಾಹ್ನ ಪಿಎಸ್ಎಲ್ ವಿ ಸಿ49 ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣಾ ಬೆಂಬಲಕ್ಕಾಗಿ ಇಒಎಸ್ -01 ಉಪಗ್ರಹವನ್ನು ಕೊಂಡೊಯ್ದಿದೆ. ಒಟ್ಟು9 ಅಂತಾರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಉಡಾವಣೆ ಮಾಡಲಾಗಿದೆ ಎಂದು ಇಸ್ರೋ ತಿಳಿಸಿದೆ.

ಲಿಫ್ಟ್ ಆಫ್ ಅನ್ನು ಮಧ್ಯಾಹ್ನ 3.02 ಕ್ಕೆ ನಿಗದಿಪಡಿಸಲಾಗಿತ್ತು, ಆದರೆ ವಿಳಂಬವಾಗಿ 3.12ಕ್ಕೆ ಸ್ಫೋಟಗೊಂಡಿದೆ ಎಂದು ಸತೀಶ್ ಧವನ್ ಬಾಹ್ಯಾಕಾಶ ಸಂಸ್ಥೆ ಹೇಳಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ 2020ರ ನವೆಂಬರ್ 7ರಂದು ಉಡಾವಣೆಯನ್ನ ತಾತ್ಕಾಲಿಕವಾಗಿ 1502 Hrs IST ನಲ್ಲಿ ನಿಗದಿಮಾಡಲಾಗಿದೆ’ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಭಾರತದ ಪಿಎಸ್ ಎಲ್ ವಿ-ಸಿ49 ಹಯು EOS-01 ಅನ್ನ ಪ್ರಾಥಮಿಕ ಉಪಗ್ರಹವಾಗಿ ಒಂಬತ್ತು ಅಂತಾರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಉಡಾವಣೆ ಮಾಡಿದೆ.
ಕೊರೋನಾದಿಂದ ಕಳೆದ ಕೆಲ ತಿಂಗಳಿಂದ ಇಸ್ರೋದ ಅಂತರಿಕ್ಷ ಕಾರ್ಯಕ್ರಮಗಳು ಸ್ಥಗಿತವಾಗಿತ್ತು. ಇದೀಗ ಭೂ ವೀಕ್ಷಣಾ ಉಪಗ್ರಹ ಇಒಎಸ್-01ನ ಉಡಾವಣೆ ಮೂಲಕ ಮತ್ತೆ ಇಸ್ರೋ ಅಂತರಿಕ್ಷ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments