ದಾವಣಗೆರೆ : ಸಚಿವ ಜಗದೀಶ್ ಶೆಟ್ಟರ್ ಅವರ ಮಗ ಮತ್ತು ಸೊಸೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ದಾವಣಗೆರೆಯ ಹಳೇ ಕುಂದವಾಡ ಬಳಿಯ NH -4 ನಲ್ಲಿ ಘಟನೆ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಸ್ತೆಯ ಡಿವೈಡರ್ ಬಳಿ ಲಾರಿ ಹಾಗೂ ಲ್ಯಾಂಡ್ ರೋವರ್ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶೆಟ್ಟರ್ ಪುತ್ರ ಪ್ರಶಾಂತ್ ಶೆಟ್ಟರ್, ಸೊಸೆ ಅಂಚಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಾಲಕನಿಗೂ ಗಾಯಗಳಾಗಿವೆ.ಗಾಯಗಳುಗಳನ್ನು ಸದ್ಯ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಸಚಿವರ ಪುತ್ರ ಮತ್ತು ಸೊಸೆ ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.KA 05 AR 6577 ನಂಬರಿನ ಲಾರಿ ಹಾಗೂ ಪ್ರಶಾಂತ್ ಶೆಟ್ಟರ್ ಇದ್ದ KA03 NE 8 ನಂಬರಿನ ರೇಂಜ್ ರೋವರ್ ಕಾರು ನಡುವೆ ಅಪಘಾತ ಸಂಭವಿಸಿದೆ.
ಇನ್ನು ಈ ಸ್ಥಳದಲ್ಲಿ ಪದೇ ಪದೇ ಅಪಘಾತ ನಡೆದರೂ ಕ್ರಮ ವಹಿಸುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.ಘಟನಾ ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್ಐ ಕಿರಣಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತಿದ್ದಾರೆ.