Saturday, December 4, 2021
No menu items!
Home Latest ಆನ್ ಲೈನ್ ಮಾಧ್ಯಮಕ್ಕೆ ಪ್ರಸಾರಾಂಗ ಸಚಿವಾಲಯದಿಂದ ಮೂಗುದಾರ..!

ಆನ್ ಲೈನ್ ಮಾಧ್ಯಮಕ್ಕೆ ಪ್ರಸಾರಾಂಗ ಸಚಿವಾಲಯದಿಂದ ಮೂಗುದಾರ..!

ನವದೆಹಲಿ: ಇಲ್ಲಿವರೆಗೆ ಒಂದಷ್ಟು ಹಣ ಇದ್ದರೆ ಯಾರು ಬೇಕಾದರು ನ್ಯೂಸ್ ಪೋರ್ಟಲ್ ಗಳನ್ನು ತೆರೆಯಬಹುದಾಗಿತ್ತು. ಆದ್ರೆ ಇದೀಗ ಅದಕ್ಕೆ ಅಂಕುಶ ಬಿದ್ದಿದೆ. ಮಾಹಿತಿ ಮತ್ತು ಪ್ರಸಾರಾಂಗ ಸಚಿವಾಲಯವು ಹೊಸ ಆದೇಶ ಹೊರಡಿಸಿದ್ದು, ಸುದ್ದಿ ಜಾಲತಾಣಗಳು ಇನ್ಮುಂದೆ ನೋಂದಣಿ ಮಾಡಿಸಿಕೊಳ್ಳಬೇಕಾಗಿದೆ.

ಡಿಜಿಟಲ್ ಅಥವಾ ಆನ್ ಲೈನ್ ಮಾಧ್ಯಮ, ಆನ್ ಲೈನ್ ಚಲನಚಿತ್ರ, ಆನ್ ಲೈನ್ ಆಡಿಯೋ, ದೃಶ್ಯ ಮಾಧ್ಯಮ, ಆನ್ ಲೈನ್ ಸುದ್ದಿ, ಪ್ರಚಲಿತ ವಿದ್ಯಮಾನಗಳನ್ನು ಬಿತ್ತರಿಸುವ ಯಾವುದೇ ಆನ್ ಲೈನ್ ಮಾಧ್ಯಮವನ್ನು ಮಾಹಿತಿ ಹಾಗೂ ಪ್ರಸಾರ ಸಚಿವಾಲಯದಡಿಗೆ ತರುವ ಆದೇಶವನ್ನು ಸರ್ಕಾರ ಹೊರಡಿಸಿದೆ. ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸಲು ಯಾವುದೇ ನಿಯಮ, ಕಾನೂನು ಅಥವಾ ಸ್ವಾಯತ್ತ ಸರ್ಕಾರ ಸಂಸ್ಥೆಯು ಇಲ್ಲದಿರುವ ಹಿನ್ನೆಲೆಯಲ್ಲಿ, ಈ ಆದೇಶವನ್ನು ಹೊರಡಿಸಲಾಗಿದೆ. ಈ ಆದೇಶವು ಆನ್ ಲೈನ್ ನಲ್ಲಿ ತೆರೆ ಕಾಣುವ ಚಲನಚಿತ್ರಗಳು, ಆಡಿಯೋ ವಿಷ್ಯುವಲ್ ಕಾರ್ಯಕ್ರಮಗಳಿಗೂ ಅನ್ವಯಿಸುತ್ತದೆ ಎಂದು ತಿಳಿಸಲಾಗಿದೆ.

ಈ ಆದೇಶ ಮುನ್ನಲೆಗೆ ಬರುತ್ತಿರುವುದು ಡಿಜಿಟಲ್ ಪತ್ರಿಕೋದ್ಯಮವನ್ನು ಅಧಿಕೃತಗೊಳಿಸಲಾಗುತ್ತಿದೆ. ಸುಳ್ಳು ಸುದ್ದಿ ಹರಡುವುದನ್ನು ತಡೆಗಟ್ಟುವ ಉದ್ದೇಶವಾಗಿರುವುದರಿಂದ, ಅಧಿಕೃತ ವೆಬ್ ಪೋರ್ಟಲ್ ಗಳು ಸುಳ್ಳು ಸುದ್ದಿ ಹರಡಿದರೆ ಆ ವಿರುದ್ಧ ಕ್ರಮ ತೆಗೆದುಕೊಳ್ಳಬಹುದಾಗಿದೆ.

ಕಳೆದ ವರ್ಷ, ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್, ಮಾಧ್ಯಮದ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಯಾವುದೇ ಕ್ರಮವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ ಎಂದಿದ್ದರು. ಜೊತೆಗೆ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ಇರುವಂತೆ ಆನ್ ಲೈನ್ ಮಾಧ್ಯಮಕ್ಕೂ ನಿಯಂತ್ರಣದ ಅವಶ್ಯಕತೆ ಇದೆ ಎಂದಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments