Tuesday, August 3, 2021
No menu items!
Home Bharata ಸರ್ಜರಿ ಬಳಿಕ ಚೇತರಿಕೆ ಕಂಡ ಕಪಿಲ್ ದೇವ್

ಸರ್ಜರಿ ಬಳಿಕ ಚೇತರಿಕೆ ಕಂಡ ಕಪಿಲ್ ದೇವ್

ನವದೆಹಲಿ : ಭಾರತದ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಹೃದಯಾಘಾತದಿಂದ ನಿನ್ನೆ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದರು. ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ನಂತರ ಸ್ವಲ್ಪ ಚೇತರಿಸಿಕೊಂಡಿದ್ದಾರೆ.

ಆಸ್ಪತ್ರೆಯ ಬೆಡ್ ಮೇಲೆ ತಮ್ಮ ಮಗಳ ಜೊತೆಗೆ ಕಪಿಲ್ ದೇವ್ ಖುಷಿಯಿಂದ ಕುಳಿತಿರುವ ಫೋಟೋವೊಂದನ್ನು ಟ್ವಿಟ್ಟರ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇನ್ನು ತಮ್ಮ ಆರೋಗ್ಯಕ್ಕೆ ಹಾರೈಸಿದ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿರುವ ಕಪಿಲ್ ದೇವ್, ಎಲ್ಲರಿಗೂ ನಮಸ್ಕಾರ. ನಾನೀಗ ಆರೋಗ್ಯವಾಗಿದ್ದೇನೆ. ಕೆಲವೇ ದಿನಗಳಲ್ಲಿ ಸಂಪೂರ್ಣ ಗುಣವಾಗಿ ಡಿಸ್ಚಾರ್ಜ್ ಆಗುತ್ತೇನೆ. ಮತ್ತೆ ಗಾಲ್ಫ್ ಆಡಲು ಕಾಯುತ್ತಿದ್ದೇನೆ. ನೀವೆಲ್ಲರೂ ನನಗೆ ಕುಟುಂಬದವರಿದ್ದಂತೆ. ನಿಮ್ಮ ಹಾರೈಕೆಯಿಂದ ನಾನು ಆರೋಗ್ಯದಿಂದಿದ್ದೇನೆ, ಎಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

61 ವರ್ಷದ ಕಪಿಲ್ ದೇವ್ ಗೆ ನಿನ್ನೆ ಹೃದಯಾಘಾತವಾಗಿತ್ತು. ಭಾರತಕ್ಕೆ ಮೊಟ್ಟ ಮೊದಲ ವಿಶ್ವಕಪ್ ಗೆದ್ದುಕೊಟ್ಟ ಕ್ರಿಕೆಟ್ ತಂಡದ ಕ್ಯಾಪ್ಟನ್ ಕಪಿಲ್ ದೇವ್ ಅವರ ಆರೋಗ್ಯ ಬೇಗ ಚೇತರಿಕೆ ಕಾಣಲಿ ಎಂದು ಭಾರತ ಮಾತ್ರವಲ್ಲದೆ ಬೇರೆ ದೇಶಗಳ ಅಭಿಮಾನಿಗಳು ಕೂಡ ಹಾರೈಸಿದ್ದರು. ಅವರೆಲ್ಲರ ಹಾರೈಕೆಯಂತೆ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಇಂಗ್ಲೆಂಡ್ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತದ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ನಾಯಕತ್ವದಲ್ಲಿ ಭಾರತ ತಂಡ 1983ರಲ್ಲಿ ವಿಶ್ವಕಪ್ ಗೆದ್ದಿತ್ತು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments