Friday, September 24, 2021
No menu items!
Home Bharata ಇಂದಿನಿಂದಲೇ ನೆರೆಯ ತಮಿಳುನಾಡಿಗೆ ಕೆಎಸ್ಆರ್ ಟಿಸಿ ಬಸ್ ಪುನಾರಂಭ

ಇಂದಿನಿಂದಲೇ ನೆರೆಯ ತಮಿಳುನಾಡಿಗೆ ಕೆಎಸ್ಆರ್ ಟಿಸಿ ಬಸ್ ಪುನಾರಂಭ

ಬೆಂಗಳೂರು : ಕೋವಿಡ್ 19 ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರಾಜ್ಯ ಸಾರಿಗೆ ನಿಯಮವನ್ನು ಇದೀಗಾಗಲೇ ಸಡಿಲಗೊಳಿಸಿದ್ದು ಹಲವು ರಾಜ್ಯಗಳಿಗೆ ಕರ್ನಾಟಕದ ಬಸ್ ಗಳು ಸಂಚಾರ ಪುನಾರಂಭಿಸಿದ್ದವು. ಆದರೆ ನೆರೆಯ ರಾಜ್ಯ ತಮಿಳುನಾಡಿಗೆ ಮಾತ್ರ ಇನ್ನೂ ಕೂಡ ಸಾರಿಗೆ ಸಂಚಾರ ಆರಂಭವಾಗಿರಲಿಲ್ಲ. ಆದರೆ ಇದೀಗ ತಮಿಳುನಾಡಿಗೆ ಸಂಚರಿಸಲು ಸಾರಿಗೆ ಸಂಸ್ಥೆಗೆ ಅನುಮತಿ ಸಿಕ್ಕಿದ್ದು ಇಂದಿನಿಂದಲೇ ಸಂಚಾರ ಆರಂಭಿಸಿವೆ.

ತಮಿಳುನಾಡು ಸರ್ಕಾರ ರಾಜ್ಯ ಸರ್ಕಾರಕ್ಕೆ ಕೊರೋನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಾರಿಗೆ ಸಂಚಾರ ಪುನಾರಾರಂಭಿಸಲು ಕೇಳಿಕೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇಂದಿನಿಂದಲೇ ಬಸ್ ಸಂಚಾರ ಆರಂಭಿಸಿದೆ. ಕೊರೋನಾ ಮುನ್ನೆಚ್ಚರಿಕೆ ಕ್ರಮ ಮತ್ತು ಕೋವಿಡ್ 19 ನಿಯಮಗಳನ್ನು ಪಾಲಿಸಿಕೊಂಡು ಈಗಿನಿಂದಲೇ ಕೆಎಸ್ಆರ್ಟಿಸಿ ಬಸ್ ಗಳು ಕಾರ್ಯಾರಂಭ ಮಾಡಲಿವೆ.

11ನೇ ತಾರಿಖಿನಿಂದ 16 ರ ಒಳಗಾಗಿ ಬಸ್ ಸಂಚಾರ ಪುನಾರಾರಂಭಿಸುವಂತೆ ತಮಿಳುನಾಡು ಸರ್ಕಾರ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಮನವಿ ಪುರಸ್ಕರಿಸದ ರಾಜ್ಯ ಸರ್ಕಾರ ಮತ್ತು ಕೆಎಸ್ಆರ್ ಟಿಸಿ ಬಸ್ ಪುನಾರಂಭಿಸಿದೆ.

ಇದೀಗ ಬೆಳಕಿನ ಹಬ್ಬ ದೀಪಾವಳಿ ಕೂಡಾ ಹತ್ತಿರದಲ್ಲಿದ್ದು ನೆರೆಯ ತಮಿಳುನಾಡಿಗೆ ತೆರಳುವ ಪ್ರಯಾಣಿಕರು ಫುಲ್ ಖುಷ್ ಆಗಿದ್ದಾರೆ. ಕೊರೋನಾ ತಡೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರ ಮತ್ತು ಸಿಬ್ಬಂದಿ ವರ್ಗದ ಹಿತದೃಷ್ಟಿಯಿಂದ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments