Saturday, December 4, 2021
No menu items!
Home Karavali ಸೆ.21ರಿಂದ ಕಾಸರಗೋಡು-ಮಂಗಳೂರು KSRTC ಬಸ್ ಸಂಚಾರ ಶುರು

ಸೆ.21ರಿಂದ ಕಾಸರಗೋಡು-ಮಂಗಳೂರು KSRTC ಬಸ್ ಸಂಚಾರ ಶುರು

ಕಾಸರಗೋಡು: ಕೋವಿಡ್ 19 ಹಿನ್ನೆಲೆಯಲ್ಲಿ ಸಂಪೂರ್ಣ ಸ್ಥಗಿತಗೊಂಡಿದ್ದ ಕಾಸರಗೋಡು-ಮಂಗಳೂರು ಕೆ.ಎಸ್.ಆರ್.ಟಿ.ಸಿ (KSRTC Bus) ಬಸ್ ಸಂಚಾರ ಸೆಪ್ಟೆಂಬರ್ 21ರಿಂದ ಆರಂಭಗೊಳ್ಳಲಿದೆ.

ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದಂತೆ ಕಳೆದ ಮಾರ್ಚ್ ತಿಂಗಳಿನಿಂದ ಅಂತಾರಾಜ್ಯ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಜೊತೆಗೆ ಗಡಿ ರಸ್ತೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಈಗಾಗಲೇ ಉಭಯ ಜಿಲ್ಲಾಡಳಿತಗಳ ಆದೇಶದ ಬಳಿಕ ಕೆಲವು ಪ್ರಮುಖ ಗಡಿಗಳನ್ನು ತೆರವುಗೊಳಿಸಿ ಅಂತಾರಾಜ್ಯ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೀಗ ಮಂಗಳೂರು-ಕಾಸರಗೋಡು ಜಿಲ್ಲೆಗಳ ನಡುವೆ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಆನ್‍ಲೈನ್ ಮೂಲಕ ಟಿಕೆಟ್ ಬುಕ್ ಮಾಡಲು ಈಗಾಗಲೇ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರ ಬೇಡಿಕೆಗನುಗುಣವಾಗಿ ಬಸ್ ಸಂಚಾರ ನಡೆಸಲಿವೆ. ಒಂದು ಬಸ್ಸಿಗೆ 40 ಮಂದಿ ಪ್ರಯಾಣಿಕರಿದ್ದಲ್ಲಿ ಮಾತ್ರವೇ ಸಂಚಾರ ನಡೆಸಲಿದೆ. ಮೊದಲ ಹಂತದಲ್ಲಿ ಕಾಸರಗೋಡು-ಮಂಗಳೂರು ಹಾಗೂ ಕಾಸರಗೋಡು-ಪಂಜಿಕ್ಕಲ್ ರಸ್ತೆಗಳಲ್ಲಿ ಮಾತ್ರವೇ ಬಸ್ ಸಂಚಾರ ಶುರುವಾಗಲಿದೆ. ಇದಾದ ಬಳಿಕ ಉಳಿದ ಮಾರ್ಗಗಳ ಬಸ್ ಸಂಚಾರ ಆರಂಭಿಸುವ ಬಗ್ಗೆ ಕೇರಳ ಸರ್ಕಾರ ಹಾಗೂ ಜಿಲ್ಲಾಡಳಿತ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎನ್ನಲಾಗಿದೆ.

Kasaragod – Mangaluru KSRTC Bus Service restarting from September 21.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments