Monday, January 24, 2022
No menu items!
Home Kasaragod ಸೆ.18ರಂದು ಕೇರಳ ತುಳು ಭವನ ಉದ್ಘಾಟನೆ

ಸೆ.18ರಂದು ಕೇರಳ ತುಳು ಭವನ ಉದ್ಘಾಟನೆ

ಕಾಸರಗೋಡು: ತುಳು ಭಾಷೆ-ಸಂಸ್ಕೃತಿಯನ್ನು ಉತ್ತೇಜಿಸಲು ಮಂಜೇಶ್ವರ ತಾಲೂಕಿನ ಹೊಸಂಗಡಿ ಬಳಿಯ ಕಡಂಬಾರು ಗ್ರಾಮದ ದುರ್ಗಿಪಳ್ಳದಲ್ಲಿ ನಿರ್ಮಿಸಿರುವ ಕೇರಳ ತುಳು ಅಕಾಡೆಮಿ ಭವನ ಸೆ.18ರಂದು ಲೋಕಾರ್ಪಣೆಗೊಳ್ಳಲಿದೆ.

ಕೇರಳದ ಸಂಸ್ಕೃತಿ ಖಾತೆ ಸಚಿವ ಎ.ಕೆ.ಬಾಲನ್ ಸೆ.18ರಂದು ಸಂಜೆ 4 ಗಂಟೆಗೆ ಆನ್ ಲೈನ್ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಂದಾಯ ಮತ್ತು ವಸತಿ ಸಚಿವ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸುವರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಶಾಸಕ ಎಂ.ಸಿ.ಕಮರುದ್ದೀನ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್, ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಬ್ಲಾಕ್-ಗ್ರಾಮ ಪಂಚಾಯತ್ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕೇರಳ ತುಳು ಅಕಾಡೆಮಿ ಸ್ಥಾಪಕಾಧ್ಯಕ್ಷರಾಗಿದ್ದ ಡಾ.ವೆಂಕಟರಾಜ ಪುಣಿಂಚಿತ್ತಾಯ ಅವರ ಹೆಸರಿನ ಗ್ರಂಥಾಲಯ ಉದ್ಘಾಟನೆಗೊಳ್ಳಲಿದೆ.

ತುಳು ತ್ರೈಮಾಸ ಪತ್ರಿಕೆ ತೆಂಬೆರೆಯ ವಿಶೇಷ ಸಂಚಿಕೆ ಇದೇ ವೇಳೆ ಬಿಡುಗಡೆಗೊಳ್ಳಲಿದೆ. ಕೋವಿಡ್ ಪ್ರೊಟೋಕಾಲ್ ಅನುಸಾರವಾಗಿ ಈ ಕಾರ್ಯಕ್ರಮ ನಡೆಯಲಿದೆ. ಆನ್‍ಲೈನ್ ತುಳು ಲಿಪಿ ಕಲಿಕೆ ಪ್ರಾರಂಭವಾಗಲಿದ್ದು ಇದು ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ ಮತ್ತು ಸಾರ್ವಜನಿಕರಿಗೆ ಸಹಕಾರಿಯಾಗಿದೆ.

ಕೇರಳ ತುಳುಭವನ ಯಾಕೆ?: ಕಂದಾಯ ಇಲಾಖೆ ನೀಡಿರುವ ಒಂದು ಎಕರೆ ಸ್ಥಳದಲ್ಲಿ ಮಂಜೇಶ್ವರ ತಾಲೂಕಿನ ಹೊಸಂಗಡಿ ಬಳಿಯ ಕಡಂಬಾರು ಗ್ರಾಮದ ದುರ್ಗಿಪಳ್ಳದಲ್ಲಿ ತುಳುಭವನ ಸಾಂಸ್ಕೃತಿಕ ಕೇಂದ್ರ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ತಲೆ ಎತ್ತಿ ನಿಂತಿದೆ. 2007ರ ಸೆ.3ರಂದು ಅಂದಿನ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಕೇರಳ ತುಳು ಅಕಾಡೆಮಿಯನ್ನು ಉದ್ಘಾಟಿಸಿದ್ದರು. ವಿಧಾನಸಭೆ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ 2019 ಫೆ.27ರಂದು ಈ ಕಟ್ಟಡದ ಕಾಮಗಾರಿಯ ಶಿಲಾನ್ಯಾಸ ನೆರವೇರಿಸಿದ್ದರು. ಮಂಜೇಶ್ವರದ ಹಿಂದಿನ ಶಾಸಕ ದಿ. ಪಿ.ಬಿ.ಅಬ್ದುಲ್ ರಝಾಕ್ ಅವರ ನಿಧಿಯಿಂದ 45 ಲಕ್ಷ ರೂ. ಇದಕ್ಕಾಗಿ ಮಂಜೂರು ಮಾಡಿದ್ದರು. 3ನೇ ಹಂತವಾಗಿ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ ಅಳವಡಿಸಿ ಒಂದು ಕೋಟಿ ರೂ. ಯೋಜನೆಯಲ್ಲಿ ತುಳು ಕಲಾ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ನಿಟ್ಟಿನಲ್ಲಿ ಕಲ್ಚರಲ್ ಥಿಯೇಟರ್ ಕೂಡಾ ಸ್ಥಾಪನೆಗೊಳ್ಳಲಿದೆ.

ತುಳು ಲಿಪಿ ಕಲಿಕೆಗೆ ಆನ್ ಲೈನ್ ಸೌಲಭ್ಯ: ಕೇರಳ ತುಳು ಭವನದ ನೇತೃತ್ವದಲ್ಲಿ ಸಾರ್ವಜನಿಕರಿಗಾಗಿ ತುಳು ಲಿಪಿ ಕಲಿಕೆಗೆ ಆನ್ ಲೈನ್ ಸೌಲಭ್ಯ ಸಿದ್ಧಗೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ ಜೊತೆಯಲ್ಲಿ ತುಳು ಪ್ರೇಮಿ ಸಾರ್ವಜನಿಕರಿಗೆ ಇದು ಪ್ರಯೋಜನಕಾರಿಯಾಗಲಿದೆ. ಸರಳ ಪಠ್ಯ ಪದ್ಧತಿಯನ್ನು ಸಿದ್ಧಗೊಳಿಸಲಾಗತ್ತಿದೆ. ತುಳುಭವನದ ವೆಬ್ ಸೈಟ್, ಯೂಟ್ಯೂಬ್ ಚಾನೆಲ್ ಮೂಲಕ ತುಳು ಕಲಿಕೆ ಸುಲಭವಾಗುವ ರೀತಿ ತುಳು ಲಿಪಿ ಕಲಿಕೆಗೆ ವ್ಯವಸ್ಥೆ ಏರ್ಪಡಿಸಲಾಗುವುದು. ತುಳು ಭಾಷೆ-ಸಂಸ್ಕೃತಿಗೆ ಪ್ರೋತ್ಸಾಹ ನೀಡಲು, ರಾಜ್ಯ ಸರಕಾರದ ಸಹಕಾರದೊಂದಿಗೆ ವೈವಿಧ್ಯಮಯ ರೀತಿಯ ಚಟುವಟಿಕೆಗಳನ್ನು ಕೇರಳ ತುಳು ಅಕಾಡೆಮಿಯ ನೇತೃತ್ವದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ. ಈಗಾಗಲೇ ಜಾನಪದ ಉತ್ಸವಗಳು, ಆಚರಣೆಗಳು, ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ, ತೆಂಬೆರೆ ತ್ರೈ ಮಾಸಪತ್ರಿಕೆ ಇತ್ಯಾದಿಗಳು ತುಳು ಸಂಸ್ಕೃತಿಯನ್ನು ಪ್ರಧಾನ ವಾಹಿನಿಗೆ ತರುತ್ತಿವೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments