Sunday, October 17, 2021
No menu items!
Home Bharata ಬಿಜೆಪಿ ಸೇರಿದ ಬೆನ್ನಲ್ಲೇ ಕಾಂಗ್ರೆಸ್ ಬಗ್ಗೆ ಟೀಕೆ ಶುರು ಮಾಡಿದ ನಟಿ ಖುಷ್ಬೂ..!

ಬಿಜೆಪಿ ಸೇರಿದ ಬೆನ್ನಲ್ಲೇ ಕಾಂಗ್ರೆಸ್ ಬಗ್ಗೆ ಟೀಕೆ ಶುರು ಮಾಡಿದ ನಟಿ ಖುಷ್ಬೂ..!

ಬಿಜೆಪಿ, ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಖುಷ್ಬೂ, ಅಧಿಕೃತವಾಗಿ ನಿನ್ನೆ ಬಿಜೆಪಿ ಪಕ್ಷವನ್ನು ಸೇರಿದ್ದಾರೆ. ಬಿಜೆಪಿ ಸೇರಿದ ಒಂದೇ ದಿನದಲ್ಲಿ ಕಾಂಗ್ರೆಸ್ ಪಕ್ಷದವರನ್ನು ಟೀಕಿಸಿರುವ ಘಟನೆ ನಡೆದಿದೆ. ಕಾಂಗ್ರೆಸ್ಗೆ ಬುದ್ದಿವಂತ ಮಹಿಳೆಯರು ಬೇಕಾಗಿಲ್ಲ. ಅಲ್ಲಿ ಸತ್ಯವನ್ನು ಗಟ್ಟಿಯಾಗಿ ಹೇಳುವ ಹಕ್ಕಿಲ್ಲ ಎಂದು ಕಿಡಿಕಾರಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಸೇರ್ಪಡನೆಗೊಂಡು ಇಂದು ಚೆನ್ನೈಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಲ್ಲಿಯೇ ಕಾಂಗ್ರೆಸ್ ಬಗ್ಗೆ ಟೀಕೆ ಶುರು ಮಾಡಿದರು. ತಮಿಳುನಾಡು ರಾಜ್ಯ ಕಾಂಗ್ರೆಸ್ ನಾಯಕರು ‘ಬುದ್ಧಿ ಕುಂಠಿತವಾಗಿದೆ’ ಎಂದು ವಾಗ್ದಾಳಿ ನಡೆಸಿದರು.

ಬಳಿಕ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಕಾಂಗ್ರೆಸ್ಗೆ ನಿಷ್ಠೆಯಾಗಿದ್ದೆ. ಆದರೆ, ಕಾಂಗ್ರೆಸ್ ನನಗೆ ಅಗೌರ ತೋರಿಸಿತು. ಅವರಿಗೆ ಕುಶಲಮತೆ ಇರುವವರು ಬೇಡ’ ಎಂದರು.

‘ದ್ರಾವಿಡ ಚಳುವಳಿ ಪಿತಾಮಹ ಪೆರಿಯಾರ್ ಇವಿ ರಾಮಸ್ವಾಮಿ ಮಹಿಳಾ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದವರು. ಅವರ ಅನುಯಾಯಿಯಾದ ನನಗೆ, ಕಾಂಗ್ರೆಸ್ ಪಕ್ಷ ಸತ್ಯವನ್ನು ಮಾತನಾಡುವ ಹಕ್ಕನ್ನು ನೀಡಲಿಲ್ಲ’ ಎಂದು ಆಪಾದಿಸಿದ್ದಾರೆ.

ಈ ಹಿಂದೆ ನರೇಂದ್ರ ಮೋದಿ, ಬಿಜೆಪಿ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿ ಈಗ ಅದೇ ಪಕ್ಷಕ್ಕೆ ಸೇರಿರುವ ಬಗ್ಗೆ ಉತ್ತರಿಸಿದ ಅವರು, ವಿರೋಧ ಪಕ್ಷದ ಸದಸ್ಯೆಯಾದಾಗ ಬಿಜೆಪಿಯನ್ನು ಟೀಕಿಸಬೇಕಾಗುತ್ತದೆ. ಹಾಗೆಂದ ಮಾತ್ರಕ್ಕೆ ವಿರೋಧಿಸಬೇಕು ಎಂಬ ಕಾರಣಕ್ಕೆ ವಿರೋಧಿಸುತ್ತಿರಲಿಲ್ಲ. ಪ್ರಧಾನಿ ಮೋದಿ ಅವರ ಕೆಲವು ವಿಷಯಗಳನ್ನು ಶ್ಲಾಘಿಸಿದ್ದೇನೆ ಎಂದು ಕೂಡ ತಿಳಿಸಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments