Sunday, October 17, 2021
No menu items!
Home Latest ಹೊಸ ದಾಖಲೆ ಬರೆದ ಆರ್ ಸಿಬಿ 'ಕ್ಯಾಪ್ಟನ್ ಕೊಹ್ಲಿ' ..!!

ಹೊಸ ದಾಖಲೆ ಬರೆದ ಆರ್ ಸಿಬಿ ‘ಕ್ಯಾಪ್ಟನ್ ಕೊಹ್ಲಿ’ ..!!

ದುಬೈ: ನಿನ್ನೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ 52 ಎಸೆತದಲ್ಲಿ ಅಜೇಯ 90 ರನ್ ಸಿಡಿಸಿದ್ದರು. ಈ ಪಂದ್ಯದಲ್ಲಿ ಕೊಹ್ಲಿ ದಾಖಲೆಯೊಂದನ್ನು ಬರೆದಿದ್ದು ಟಿ20 ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಕೊಹ್ಲಿ 6,000 ರನ್ ಸಿಡಿಸಿದ್ದಾರೆ.
ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ಪಡೆ 4 ವಿಕೆಟ್ ಕಳೆದುಕೊಂಡು ನಿಗದಿತ 20 ಓವರ್‌ಗಳಲ್ಲಿ 169 ರನ್ ಗಳಿಸಿತು. ಈ ಮೊತ್ತವನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 132 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಧೋನಿ ಪಡೆ ಟೂರ್ನಿಯಲ್ಲಿ 5ನೇ ಸೋಲುಕಂಡಿದೆ.
ಐಪಿಎಲ್ ಟೂರ್ನಿ ಹಾಗೂ ಚಾಂಪಿಯನ್ಸ್ ಲೀಗ್ ಟೂರ್ನಿ ಮೂಲಕ ಕೊಹ್ಲಿ 6,000 ರನ್ ಪೂರೈಸಿದ್ದಾರೆ. ಈ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಚೆನ್ನೈ ವಿರುದ್ಧ ಅಬ್ಬರಿಸಿದ ವಿರಾಟ್ ಕೊಹ್ಲಿ 52 ಎಸೆತದಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 90 ರನ್ ಸಿಡಿಸಿದ್ದರು.
ಈ ಬಾರಿಯ ಐಪಿಎಲ್ ಆವೃತ್ತಿಯ ಆರಂಭದಲ್ಲಿ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿರಲಿಲ್ಲ.ರನ್‌ಗಳಿಸಲು ಸಾಕಷ್ಟು ಪರದಾಡಿದ್ದ ಕೊಹ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 72 ರನ್‌ಗಳಿಸುವ ಮೂಲಕ ಲಯಕ್ಕೆ ಮರಳಿದ್ದರು. ಡೆಲ್ಲಿ ವಿರುದ್ಧವೂ ಕೊಹ್ಲಿ 43 ರನ್‌ಗಳ ಕೊಡುಗೆಯನ್ನು ನೀಡಿದ್ದರಾದರೂ ಆ ಪಂದ್ಯದಲ್ಲಿ ಗೆಲುವು ಸಾಧ್ಯವಾಗಿರಲಿಲ್ಲ. ಇದೀಗ ಮತ್ತೆ ಲಯಕ್ಕೆ  ಮರಳಿರುವ ಕೊಹ್ಲಿ  ,ಆರ್ಸಿಬಿ ಅಭಿಮಾನಿಗಳಿಗೆ ಭರ್ಜರಿ  ಖುಷಿ  ಕೊಡುತ್ತಿದ್ದಾರೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments