Saturday, December 4, 2021
No menu items!
Home Karnataka ಬಿಜೆಪಿ ಪಕ್ಷದವರು ನನ್ನ ಬಳಿ ಬಂದಿದ್ದಾರೆ: ಹೊಸ ಬಾಂಬ್ ಸಿಡಿಸಿದ ಡಿಕೆಶಿ

ಬಿಜೆಪಿ ಪಕ್ಷದವರು ನನ್ನ ಬಳಿ ಬಂದಿದ್ದಾರೆ: ಹೊಸ ಬಾಂಬ್ ಸಿಡಿಸಿದ ಡಿಕೆಶಿ

ಬಳ್ಳಾರಿ: ಕೊರೊನಾ ಕಾಲದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮಾಡಿದೆ. ಅವರು ಕೇವಲ ಬೈ ಎಲೆಕ್ಷನ್, ವರ್ಹಾವಣೆ, ವೈಯಕ್ತಿಕ ಹಿತಾಸಕ್ತಿಯನ್ನಷ್ಟೇ ನೋಡುತ್ತಿದ್ದಾರೆ ಎಂದು ಹೊಸಪೇಟೆಯಲ್ಲಿ ಬಿಜೆಪಿ ಸರ್ಕಾರವನ್ನು ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಈ ಕ್ಷೇತ್ರದ ಶಾಸಕರನ್ನು ಕರೆದುಕೊಂಡು ಹೋಗಿ ಬಿಜೆಪಿ ಅಧಿಕಾರ ಹಿಡಿದಿದೆಯೇ ವಿನಃ, ಜನ ಬಿಜೆಪಿಗೆ ಅಧಿಕಾರ ಕೊಟ್ಟಿಲ್ಲ. ಒಂದು ಕಾಲದಲ್ಲಿ ಜನತಾದಳ 104 ಇತ್ತು, ಕಾಂಗ್ರೆಸ್ 34 ಇತ್ತು ಬಿಜೆಪಿ ಕೇವಲ 2 ಸೀಟು ಪಡೆದಿತ್ತು. ಈಗ ಅಧಿಕಾರ ಹಿಡಿದಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಹೊಸಪೇಟೆಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿರುವ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಆಹ್ವಾನ ನೀಡಿದ್ದಾರೆ. ಪಕ್ಷಕ್ಕೆ ಬರಲು ಬಯಸುವವರಿಗೆ ಯಾವುದೆ ಷರತ್ತುಗಳಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಸೇರಲು ಬಿಜೆಪಿ ಸೇರಿದಂತೆ ಬೇರೆ ಪಕ್ಷದ ನಾಯಕರು ನನ್ನ ಬಳಿ ಬಂದಿದ್ದಾರೆ. ಕಾಂಗ್ರೆಸ್ ಸೇರಬಯಸುವವರಿಗೆ ಯಾವುದೇ ಷರತ್ತನ್ನು ಹಾಕುವುದಿಲ್ಲ. ನಾನು ಯಾರ ಮೇಲೂ ವೈಯಕ್ತಿಕ ದ್ವೇಷ ಮಾಡುವುದಿಲ್ಲ. ಕಾಂಗ್ರೆಸ್ ನಾಯಕರು ಬೆಳೆಯಬೇಕು. ಪಕ್ಷದ ಭಿನ್ನಾಭಿಪ್ರಾಯ ಬದಿಗಿಟ್ಟು ಕೆಲಸ ಮಾಡಿ ಎಂದಿದ್ದಾರೆ.

ನನಗೆ ಸನ್ಮಾನ ಬೇಡ. ಬೂತ್ ಮಟ್ಟದಲ್ಲಿ ಮೆಜಾರಿಟಿ ಕೊಟ್ಟರೆ ಅದೇ ನನಗೆ ಸನ್ಮಾನ ಎಂದು ಕಾರ್ಯಕರ್ತರನ್ನು ಹುರಿದುಂವಬಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments