Sunday, October 17, 2021
No menu items!
Home Karnataka ಕುಕ್ಕೆ ದೇವಸ್ಥಾನಕ್ಕೆ ಅಭಿವೃದ್ಧಿ ಸಮಿತಿ ನೇಮಕ

ಕುಕ್ಕೆ ದೇವಸ್ಥಾನಕ್ಕೆ ಅಭಿವೃದ್ಧಿ ಸಮಿತಿ ನೇಮಕ

ಮಂಗಳೂರು : ಶ್ರೀಮಂತ ದೇವಸ್ಥಾನಗಳ ಸಾಲಿನಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನವೂ ಒಂದು. ಇಂದು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೊಸದಾಗಿ ಅಭಿವೃದ್ಧಿ ಸಮಿತಿಯನ್ನು ಆಯ್ಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕುಕ್ಕೆ ದೇವಸ್ಥಾನದಲ್ಲಿ ಈ ಹಿಂದೆ ಒಂಬತ್ತು ಮಂದಿ ಸದಸ್ಯರ ವ್ಯವಸ್ಥಾಪನಾ ಸಮಿತಿ ಇದ್ದು, ಅದರ ಕಾರ್ಯಾವಧಿ ಪೂರ್ಣಗೊಂಡು ಒಂದು ವರ್ಷದ ನಂತರ ಇದೀಗ ಹೊಸದಾಗಿ ಅಭಿವೃದ್ದಿ ಸಮಿತಿಯನ್ನು ನೇಮಕ ಮಾಡಲಾಗಿದೆ.

ಪಿ.ಜಿ.ಎಸ್ ಪ್ರಸಾದ್, ಕೃಷ್ಣ ಶೆಟ್ಟಿ, ಪ್ರಸನ್ನ, ಎಸ್. ಮೋಹನ್ ರಾಮ ಹಾಗೂ ವನಜಾ ಭಟ್ ಅವರು ದೇವಸ್ಥಾನ ಅಭಿವೃದ್ದಿ ಸಮಿತಿಯ ಸದಸ್ಯರಾಗಿದ್ದು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಸಮಿತಿಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ವ್ಯವಸ್ಥಾಪನ ಸಮಿತಿಗೆ ಪೂರಕವಾಗಿ ಕೆಲಸ ಮಾಡಬೇಕು. ಕ್ಷೇತ್ರದ ಆಂತರಿಕ ವಿಚಾರದಲ್ಲಿ ಕೈಹಾಕದಂತೆಸಮಿತಿಗೆ ಸೂಚನೆ ನೀಡಲಾಗಿದೆ. ಕೇವಲ ಮೂರು ವರ್ಷಗಳ ಅವಧಿಗೆ ಅಭಿವೃದ್ಧಿ ಸಮಿತಿ ರಚನೆ ಮಾಡಲಾಗಿದೆ.

ಅಭಿವೃದ್ದಿ ಸಮಿತಿಯ ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕರಿಗೆ ನೀಡಲಾಗುವುದು ಎಂದು ಹೇಳಲಾಗಿತ್ತು. ಆದರೆ ಆದೇಶದಲ್ಲಿ ಶಾಸಕರ ಹೆಸರಿಲ್ಲದ ಕಾರಣ ಸಮಿತಿಯಲ್ಲಿರುವ ಎಸ್. ಮೋಹನ್ ರಾಮ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ಪ್ರಕ್ರಿಯೆ ಇನ್ನೆರಡು ದಿನಗಳಲ್ಲಿ ನಡೆಯಲಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments