Friday, September 24, 2021
No menu items!
Home Karnataka ಬೇರೊಬ್ಬರ ವೈಯಕ್ತಿಕ ಬದುಕಿನಲ್ಲಿ ಮೂಗು ತೂರಿಸಬೇಡಿ: ಸಂಬರಗಿಗೆ ಡಿ.ಕೆ ರವಿ ಪತ್ನಿ ತಿರುಗೇಟು

ಬೇರೊಬ್ಬರ ವೈಯಕ್ತಿಕ ಬದುಕಿನಲ್ಲಿ ಮೂಗು ತೂರಿಸಬೇಡಿ: ಸಂಬರಗಿಗೆ ಡಿ.ಕೆ ರವಿ ಪತ್ನಿ ತಿರುಗೇಟು

ಬೆಂಗಳೂರು: ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಇತ್ತೀಚೆಗೆ ಡ್ರಗ್ ಕೇಸ್ ವಿಚಾರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕ್ತಾನೆ ಇರ್ತಾರೆ. ಅದರಲ್ಲೂ ಸಂಜನಾ ಗಲ್ರಾನಿ, ಅನುಶ್ರೀ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆರೋಪ ಮಾಡುತ್ತಲೇ ಇದ್ದಾರೆ. ಇದೀಗ ಇದ್ದಕ್ಕಿದ್ದಂತೆ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಪತ್ನಿ ಕುಸುಮಾ ಬಗ್ಗೆ ಪೋಸ್ಟ್ ಮಾಡಿದ್ದು, ಕುಸುಮಾ ಅದಕ್ಕೆ ತಿರುಗೇಟು ನೀಡಿದ್ದಾರೆ.

ಡಿ.ಕೆ.ರವಿ ಪತ್ನಿ ಕುಸುಮಾ ಭಾನುವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಫೋಟೋವೊಂದನ್ನು ತೆಗೆದುಕೊಂಡು ಕುಸುಮಾ ಅವರ ದುರಾದೃಷ್ಟ ಡಿ.ಕೆ.ರವಿ ಅವರಿಂದ ಡಿ.ಕೆ.ಶಿವಕುಮಾರ್ ಅವರಿಗೆ ವರ್ಗಾವಣೆಯಾಗಿದೆ ಎಂದು ಪ್ರಶಾಂತ್ ಸಂಬರಗಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿದ್ದರು.

ಇದಕ್ಕೆ ಉತ್ತರಿಸಿರುವ ಕುಸುಮಾ, ಸಹೋದರ ಪ್ರಶಾಂತ್ ಸಂಬರಗಿಯವರಿಗೆ, ವೈಯುಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ, ಕೆಲ ತಿಂಗಳುಗಳಿಂದ ನೀವು ಡ್ರಗ್ಸ್ ಹಾಗೂ ಇನ್ನಿತರ ಸಾಮಾಜಿಕ ಪಿಡುಗುಗಳ ವಿರುದ್ಧ ನಡೆಸುತ್ತಿರುವ ಹೋರಾಟ ಪ್ರಶಂಸನೀಯ. ಯುವಸಮೂಹಕ್ಕೆ ಡ್ರಗ್ಸ್ ವಿರುದ್ಧವಾಗಿ ಜಾಗ್ರತೆ ಮೂಡಿಸುತ್ತಿರುವ ನಿಮಗೆ ಅಭಿನಂದನೆಗಳು.

ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟ ವಿಷಯವನ್ನು ಪ್ರಸ್ತಾಪಿಸಿದ್ದೀರಿ. ಎಲ್ಲರ ಬದುಕಿನಲ್ಲಿ ಇಣುಕುವ ನೀವು ಹಿಂದೆ-ಮುಂದೆ ತಿಳಿಯದೇ ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂಬುದು ನನ್ನ ಅನಿಸಿಕೆ.

ಪ್ರತಿಯೊಬ್ಬರ ಬದುಕಿನಲ್ಲೂ ಏಳು-ಬೀಳುಗಳಿರುತ್ತವೆ, ಇದೇ ರೀತಿ ನಿಮ್ಮ ಮನೆಯಲ್ಲೇ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ?. ಹೆಣ್ಣು ಎಂಬ ಮಾತ್ರಕ್ಕೆ ಇಂತಹ ವಿಡಂಬನೆ ಮತ್ತು ಅಪಪ್ರಚಾರಗಳಿಗೆ ಒಳಗಾಗಬೇಕೆ? ಬೇರೆಯವರ ಮನೆಯ ಹೆಣ್ಣುಮಗಳ ಯಾವುದು ಎಂದು ಹುಡುಕುವ ಶಕ್ತಿ ಇರುವ ನಿಮಗೆ ಹತ್ರಾಸ್‍ನ ಮನೀಷಾ ಅತ್ಯಾಚಾರ-ಕೊಲೆ ಪ್ರಕರಣ ಕಣ್ಣಿಗೆ ಕಾಣುತ್ತಿಲ್ಲವೇಕೆ?.

ಸಹೋದರ ಪ್ರಶಾಂತ್ ಸಂಬರಗಿ ಅವರೇ, ಇದರಿಂದ ಹೆಣ್ಣುಮಕ್ಕಳ ಕುರಿತ ನಿಮ್ಮ ಬುದ್ದಿಮಟ್ಟ ತಿಳಿಯುತ್ತದೆ. ಈ ಆಲೋಚನೆಗಳನ್ನು ಮುಂದುವರಿಸಿ. ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ಫೇಸ್ ಬುಕ್‍ನಲ್ಲೇ ಉತ್ತರಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments