Tuesday, October 26, 2021
No menu items!
Home Latest ಹಿತ್ತಲ ಗಿಡ ದೊಡ್ಡಪತ್ರೆಯಲ್ಲಿ ಅಡಗಿದೆ ಹಲವು ಕಾಯಿಲೆಗೆ ಮದ್ದಿನ ಗುಣ

ಹಿತ್ತಲ ಗಿಡ ದೊಡ್ಡಪತ್ರೆಯಲ್ಲಿ ಅಡಗಿದೆ ಹಲವು ಕಾಯಿಲೆಗೆ ಮದ್ದಿನ ಗುಣ

ದೊಡ್ಡಪತ್ರೆಯನ್ನ ಸಹಜವಾಗಿ ಎಲ್ಲರು ನೋಡಿರ್ತೇವೆ. ಹಳ್ಳಿಗಳಲ್ಲಿ ಎಲ್ಲ ಹಿತ್ತಲಲ್ಲೂ ಈ ಗಿಡವನ್ನ ಬೆಳೆಯುತ್ತೇವೆ.‌ ಸಿಟಿಗಳಲ್ಲೂ ಇದರ ದರ್ಶನವೇನಹ ಕಡಿಮೆ ಆಗಿಲ್ಲ. ಮನೆ ಮುಂದೆ ಪಾಟ್ ಗಳಲ್ಲಿ ಎಲ್ಲಾ ಗಿಡದ ಜೊತೆಗೆ ದೊಡ್ಡಪತ್ರೆಯನ್ನು ಹಾಕಿಕೊಂಡಿರುತ್ತಾರೆ. ಹೀಗೆ ಸುಲಭದಲ್ಲಿ ಸಿಗುವ ಈ ಪತ್ರೆ ಹಲವು ಕಾಯಿಲೆಗೆ ರಾಮಬಾಣವಿದ್ದಂತೆ.

* ದೊಡ್ಡಪತ್ರೆಯ ದೊಡ್ಡ ಗುಣ
ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆಯ ಎಲೆಯನ್ನು ಬಾಡಿಸಿ ನೆತ್ತಿಯ ಮೇಲೆ ಇಟ್ಟರೆ ಜ್ವರ ಇಳಿಯುತ್ತದೆ.

* ದೊಡ್ಡಪತ್ರೆ ಎಲೆಗಳ ರಸ ಮತ್ತು ಅಷ್ಟೇ ಪ್ರಮಾಣದ ಎಳ್ಳೆಣ್ಣೆಯನ್ನು ನಿತ್ಯ ತಲೆಗೆ ಹಚ್ಚಿಕೊಳ್ಳುವುದರಿಂದ ಕಣ್ಣುರಿ ಕಡಿಮೆಯಾಗುತ್ತದೆ.

* ದೊಡ್ಡಪತ್ರೆ ಎಲೆಗಳನ್ನು ಜಜ್ಜಿ ರಸ ತೆಗೆದು ಜೇನಿನೊಂದಿಗೆ ಸೇರಿಸಿ ಕುಡಿಯುವುದರಿಂದ ಕಫ, ಬೇಧಿ ಕಡಿಮೆಯಾಗುತ್ತದೆ.

* ಪದೇಪದೆ ಮಕ್ಕಳಲ್ಲಿ ಕಾಡುವ ಕಫ ಕೆಮ್ಮು ಶೀತಕ್ಕೆ ನಾಲ್ಕೈದು ಸಾಂಬ್ರಾಣಿ ಎಲೆಗಳನ್ನು ಕೆಂಡದಲ್ಲಿ ಬಾಡಿಸಿ ರಸ ಹಿಂಡಿ ಜೇನು ಬೆರೆಸಿ ಕುಡಿಸಿದರೆ ಕೆಮ್ಮು, ಕಫ ಕಡಿಮೆಯಾಗುತ್ತದೆ.

* ಶೀತದಿಂದಾಗಿ ಮಕ್ಕಳಿಗೆ ಮಲಬದ್ಧತೆಯಾದರೆ ಎಲೆಗಳ ರಸದಲ್ಲಿ ಜೇನುತುಪ್ಪ ಬೆರೆಸಿ ಕುಡಿಸಬೇಕು.

* ಒಂದು ವಾರದವರೆಗೆ ದೊಡ್ಡಪತ್ರೆ ಎಲೆಯ ರಸವನ್ನು ಸೇವಿಸುವುದರಿಂದ ಹಳದಿ ರೋಗ ನಿವಾರಣೆಯಗುತ್ತದೆ.

* ಚೇಳು ಕಡಿದ ಜಾಗಕ್ಕೆ ದೊಡ್ಡಪತ್ರೆ ರಸವನ್ನು ಹಚ್ಚಿದರೆ ನೋವು ನಿವಾರಣೆಯಾಗುತ್ತದೆ.

* ಉಪ್ಪು ಸೇರಿಸಿ ತಿನ್ನುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ.

* ತುರಿಕೆ, ಕಜ್ಜಿ ಅಥವಾ ಬೆವರುಸಾಲೆ ಬಿದ್ದಾಗ ಆ ಜಾಗಕ್ಕೆ ಹಸಿಯಾಗಿ ಸಾಂಬ್ರಾಣಿ ಎಲೆಗಳನ್ನು ಹಚ್ಚುವುದರಿಂದ ತುರಿಕೆ ಕಡಿಮೆಯಾಗುತ್ತದೆ.

* ಪತ್ರೆಯ ರಸವನ್ನು ಮೊಸರಿನಲ್ಲಿ ಬೆರೆಸಿ ಮುಖ, ಕೈಕಾಲುಗಳಿಗೆ ಹಚ್ಚಿಕೊಳ್ಳವುದರಿಂದ ಕಾಂತಿಯುಕ್ತವಾಗುತ್ತದೆ. ನಾರಿನಂಶ, ಜೀವಸತ್ವ ಹಾಗೂ ಕಬ್ಬಿಣಾಂಶಗಳ ಆಗರವಾಗಿರುವ ಸಾಂಬ್ರಾಣಿ ಸೊಪ್ಪನ್ನು ಹಾಗೆಯೇ ಜಗಿದು ತಿನ್ನಬಹುದು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments