Thursday, September 16, 2021
No menu items!
Home Bharata ಕಾಮಾಕ್ಯ ದೇವಿಗೆ ಅಂಬಾನಿ ದೇಣಿಗೆ..

ಕಾಮಾಕ್ಯ ದೇವಿಗೆ ಅಂಬಾನಿ ದೇಣಿಗೆ..

ಅಸ್ಸಾಂನ ಕಾಮಾಕ್ಯ ದೇವಿ ದೇಗುಲಕ್ಕೆ ರಿಲೆಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ದಂಪತಿ ಭಾರಿ ಪ್ರಮಾಣದ ಚಿನ್ನವನ್ನು ದೇಣಿಗೆಯಾಗಿ ನೀಡಿದ್ದಾರೆ. ದೇಗುಲ ಗೋಪುರದ ಮೂರು ಕಲಶಗಳ ನಿರ್ಮಾಣಕ್ಕಾಗಿ 19 ಕೆ.ಜಿ ಚಿನ್ನ ದಾನ ಮಾಡಿದ್ದಾರೆ.

ಈ ಚಿನ್ನದಿಂದ ಗೋಪುದ ಮೂರು ಕಲಶಗಳನ್ನು ನಿರ್ಮಿಸಲಾಗುತ್ತಿದೆ. ಮೂರು ತಿಂಗಳ ಹಿಂದೆ ಕಾಮಾಕ್ಯ ದೇಗುಲಕ್ಕೆ ಚಿನ್ನ ದಾನ ಮಾಡುವುದಾಗಿ ಅಂಬಾನಿ ದಂಪತಿ ವಾಗ್ದಾನ ಮಾಡಿದ್ದರು ಎಂದು ಕಾಮಾಕ್ಯ ದೇಗುಲದ ಮೂಲಗಳು ಹೇಳಿವೆ. ಗೋಪುರದ ಮೂರು ಕಲಶಗಳ ನಿರ್ಮಾಣ ವೆಚ್ಚವನ್ನು ತಾವೇ ಭರಿಸುವುದಾಗಿ ಅಂಬಾನಿ ಹೇಳಿದ್ದರು.

ವಾಗ್ದಾನದಂತೆ, ರಿಲೆಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಪರವಾಗಿ ಚಿನ್ನ ನೀಡಲಾಗಿದೆ. ಕಲಶಗಳ ನಿರ್ಮಾಣ ಕಾರ್ಯಗಳು ಪ್ರಾರಂಭವಾಗಿದ್ದು, ನಿರ್ಮಾಣ ಕಾರ್ಯದಲ್ಲಿ ಶಿಲ್ಪಿಗಳ ಜೊತೆಗೆ ರಿಲೆಯನ್ಸ್ ಎಂಜಿನಿಯರ್‌ಗಳು ಸಹ ಭಾಗಿಯಾಗಿದ್ದಾರೆ.

ಈ ಕಲಶಗಳ ನಿರ್ಮಾಣ ಪೂರ್ಣಗೊಂಡ ನಂತರ ಮುಖೇಶ್ ಅಂಬಾನಿ, ಪತ್ನಿ ನೀತಾ ಅಂಬಾನಿ ಕಾಮಾಕ್ಯ ಅಮ್ಮನವರ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. ದೇಶದ ಶಕ್ತಿ ಪೀಠಗಳಲ್ಲಿ ಒಂದಾದ ಕಾಮಾಕ್ಯ ದೇವಾಲಯ ಅಸ್ಸಾಂನ ನೀಲಾಚಲ ಪರ್ವತಗಳಲ್ಲಿದ್ದು, ದೇಶಾದ್ಯಂತದ ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments