ಬೆಂಗಳೂರು: ನವೆಂಬರ್ 3 ರಂದು ಆರ್ ಆರ್ ನಗರ ಉಪಚುನಾವಣೆ ಬಿಸಿ ಜೋರಾಗಿದೆ. ಈಗಾಗಲೇ ಅಭ್ಯರ್ಥಿಗಳ ಪರ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್ ನಿಂದ ಡಿ ಕೆ ರವಿ ಪತ್ನಿ ಕುಸುಮಾ ಅಖಾಡದಲ್ಲಿದ್ದು, ಕಾಂಗ್ರೆಸ್ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಇನ್ನು ಜೆಡಿಎಸ್ ನಿಂದ ಜ್ಞಾನಭಾರತಿ ಕೃಷ್ಣಮೂರ್ತಿ ಸ್ಪರ್ಧಿಸಿದ್ದಾರೆ. ಇನ್ನು ಬಿಜೆಪಿ ಪರ ಮುನಿರತ್ನ ಸ್ಪರ್ಧೆ ನಡೆಸಿದ್ದು, ಗೆಲುವಿಗಾಗಿ ಅಭ್ಯರ್ಥಿಗಾಗಿ ಪಣ ತೊಟ್ಟಿದ್ದಾರೆ. ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಪಕ್ಷೇತರ ಅಭ್ಯರ್ಥಿ ಮುನಿರತ್ನ ನಾಮಪತ್ರ ವಾಪಸ್ ಪಡೆದಿದ್ದಾರೆ.
ಉಪ ಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 19 ಕೊನೆಯ ದಿನವಾಗಿತ್ತು. ಕ್ಷೇತ್ರದಲ್ಲಿ ನಾಲ್ವರು ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ ಪಡೆದಿದ್ದು, ಕಣದಲ್ಲಿ 16 ಅಭ್ಯರ್ಥಿಗಳು ಮಾತ್ರ ಉಳಿದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮುನಿರತ್ನ, ಮುನಿರತ್ನಮ್ಮ, ಸಿ. ಆನಂದ್ ಮತ್ತು ಆರ್. ಕುಮಾರ್ ನಾಮಪತ್ರಗಳನ್ನು ವಾಪಸ್ ಪಡೆದಿದ್ದಾರೆ. ಇದರಿಂದಾಗಿ ಕಣದಲ್ಲಿ ಒಬ್ಬರೇ ಮುನಿರತ್ನ ಉಳಿದಿದ್ದಾರೆ.
ಮತದಾನಕ್ಕಾಗಿ ಒಟ್ಟು 678 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಕ್ಷೇತ್ರದಲ್ಲಿ ಒಟ್ಟು4,62,201 ಮತದಾರರು ಇದ್ದಾರೆ. ಇವರಲ್ಲಿ ಪುರುಷರು 2,41,0498, ಮಹಿಳೆಯರು 2,21,073 ಮತ್ತು ಇತರೆ 79 ಇದೆ. ಈ ಹಿಂದೆ ನಡೆದ ಮತದಾನದ ಆಧಾರದ ಮೇಲೆ ಕ್ಷೇತ್ರದ 79 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. 2043 ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕಾಗಿ ನಿಯೋಜನೆ ಮಾಡಲಾಗಿದೆ.