Tuesday, June 15, 2021
No menu items!
Home Karnataka ಅರಮನೆ ಅಂಗಳ ಪ್ರವೇಶಿಸಲು ಗಜಪಡೆ ರೆಡಿ

ಅರಮನೆ ಅಂಗಳ ಪ್ರವೇಶಿಸಲು ಗಜಪಡೆ ರೆಡಿ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಈಗಾಗಲೇ ಮೈಸೂರಿಗೆ ಆಗಮಿಸಿ ಅರಣ್ಯಭವನದಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆಯನ್ನ ಸ್ವಾಗತಿಸಲು ಮೈಸೂರು ಜಿಲ್ಲಾಡಳಿತ ಮತ್ತು ಅರಮನೆ ಮಂಡಳಿ ಸಜ್ಜಾಗಿದೆ.

ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಇಂದು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಸ್ವಾಗತ ಕಾರ್ಯಕ್ರಮ ನಡೆಯಲಿದೆ. ಇಂದು 12.18 ಕ್ಕೆ ಗಜಪಡೆಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸಂಪುಟ ಎಸ್ ಟಿ ಸೋಮಶೇಖರ್ ಗಜಪಡೆಯನ್ನ ಸ್ವಾಗತಿಸಲಿದ್ದಾರೆ.

ಜಿಲ್ಲಾಡಳಿತ ಹಾಗೂ ಅರಮನೆ ಮಂಡಳಿಯಿಂದ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲು ಸಿದ್ದತೆ ನಡೆಸಲಾಗುತ್ತಿದೆ. ನಿನ್ನೆ ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಗಜಪಡೆಗೆ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ನಂತರ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳ ತಂಡ ಮೈಸೂರಿನ ಅರಣ್ಯ ಭವನಗೆ ಆಗಮಿಸಿದ್ದು ಅಲ್ಲೇ ಬೀಡುಬಿಟ್ಟಿವೆ. ಇದೀಗ ಅರಣ್ಯಭವನದಿಂದ ಅಭಿಮನ್ಯು ಅಂಡ್ ಟೀಮ್ ನೇರವಾಗಿ ಲಾರಿಗಳ ಮೂಲಕ ಅರಮನೆ ಆವರಣಕ್ಕೆ ಬಂದಿಳಿಯಲಿವೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments