Saturday, December 4, 2021
No menu items!
Home Karnataka ಅಧಿಕಾರವಿದ್ದಾಗ ಪ್ರೇಮವಿವಾಹ, ಇಲ್ಲದಿದ್ದಾಗ ಬೈದುಕೊಳ್ತಾರೆ : ಕಾಂಗ್ರೆಸ್, ಜೆಡಿಎಸ್ ಬಗ್ಗೆ ಕಟೀಲು ಕಿಡಿ..!

ಅಧಿಕಾರವಿದ್ದಾಗ ಪ್ರೇಮವಿವಾಹ, ಇಲ್ಲದಿದ್ದಾಗ ಬೈದುಕೊಳ್ತಾರೆ : ಕಾಂಗ್ರೆಸ್, ಜೆಡಿಎಸ್ ಬಗ್ಗೆ ಕಟೀಲು ಕಿಡಿ..!

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ. ಚುನಾವಣಾ ಅಖಾಡ ಬಿಸಿಯಾಗಿದೆ. ಕಾಂಗ್ರೆಸ್, ಜೆಡಿಎಸ್ ನಲ್ಲಿ ತಳಮಳ ಶುರುವಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಘಟಾನುಘಟಿ ನಾಯಕರು ಬಿಜೆಪಿ ಸೇರುತ್ತಾರೆ ಹಲವು ಕಾಂಗ್ರೆಸ್, ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಪೂರ್ಣ ಬಹುಮತ ಇದ್ದಾಗಲೂ ಯಾವುದೇ ಅಭಿವೃದ್ಧಿ ಮಾಡಲಿಲ್ಲ. ಟಿಪ್ಪು ಜಯಂತಿ ಮೂಲಕ ಸಮಾಜ ಒಡೆಯುವ ಮತ್ತು ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಕೆಲಸ ಸಿದ್ದರಾಮಯ್ಯ ಸರ್ಕಾರದಲ್ಲಿ ಆಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ದೇವೇಗೌಡರ ಕುಟುಂಬಕ್ಕೆ ಸಾಧ್ಯವಾಗುವಷ್ಟು ತೊಂದರೆ ಕೊಟ್ಟರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಲೇವಡಿ ಮಾಡಿದರು.

ಇನ್ನು ಕಾಂಗ್ರೆಸ್ನ ಗೂಂಡಾಗಿರಿ ರಾಜಕೀಯ ಕಂಡು, ಬೇಸತ್ತು ಇಂದು ಪ್ರಮುಖರು ಬಿಜೆಪಿ ಸೇರ್ತಾ ಇದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಪ್ರಮುಖ ನಾಯಕರು ಬಿಜೆಪಿ ಸೇರ್ತಾರೆ. ಹಲವು ಪ್ರಮುಖರು ಬಿಜೆಪಿಯ ಕದ ತಟ್ತಾ ಇದ್ದಾರೆ ಎಂದು ಹೊಸ ಬಾಂಬ್ ಹಾಕಿದರು.

ಕಾಂಗ್ರೆಸ್ ನಲ್ಲಿ ಇಬ್ಬರು ಲೀಡರ್. ಶಿರಾದಲ್ಲಿ ಒಬ್ಬರು, ಆರ್ ಆರ್ ನಗರದಲ್ಲಿ ಇನ್ನೊಬ್ಬರು. ಶಿರಾದಲ್ಲಿ ತಮ್ಮ ಅಭ್ಯರ್ಥಿ ಗೆಲ್ಲಬೇಕು ಅಂತ ಒಬ್ಬರು. ಆರ್ ಆರ್ ನಗರದಲ್ಲಿ ತನ್ನ ಅಭ್ಯರ್ಥಿ ಗೆಲ್ಲಬೇಕು ಎಂದು ಇನ್ನೊಬ್ಬರು. ಈ ಉಪ ಚುನಾವಣೆ ಮುಗಿದ ಮೇಲೆ ಬಂಡೆ ಛಿದ್ರವಾಗುತ್ತೆ. ಹುಲಿಯಾ ಕಾಡಿಗೆ ಹೋಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಕಟೀಲ್ ವ್ಯಂಗ್ಯ ಮಾಡಿದರು.

ಇದೇ ವೇಳೆ ಜೆಡಿಎಸ್ ಬಗ್ಗೆಯೂ ಮಾತಾಡಿರುವ ಕಟೀಲು, ಕಾಂಗ್ರೆಸ್ ಕತೆ ಈ ರೀತಿಯದ್ದಾದರೆ, ಜೆಡಿಎಸ್ ಕತೆ ಮತ್ತೊಂದು ರೀತಿ. ಅಧಿಕಾರ ಇದ್ದಾಗ ಒಂದು, ಇಲ್ಲದಿದ್ದಾಗ ಇನ್ನೊಂದು. ಅಪ್ಪ, ಮಗ ಒಂದೊಂದು ರೀತಿ. ಅಧಿಕಾರ ಬೇಕಾದಾಗ ಪ್ರೇಮ ವಿವಾಹ ಆಗ್ತಾರೆ. ಆಮೇಲೆ ಬೈದಾಡಿಕೊಳ್ತಾರೆ. ಅಪ್ಪ ಒಂದು ಪಕ್ಷದ ಪರ ಮಾತಾಡ್ತಾರೆ. ಮಗ ಒಂದು ಪಕ್ಷದ ಪರ ಮಾತಾಡ್ತಾರೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ವ್ಯಂಗ್ಯ ಮಾಡಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments