Saturday, December 4, 2021
No menu items!
Home Karnataka ಸಿಬಿಐ ದಾಳಿ ಬೆನ್ನಲ್ಲೇ ಡಿಕೆಶಿಗೆ ನಿವಾಸಕ್ಕೆ ನಂಜಾವಧೂತ ಶ್ರೀಗಳು ಭೇಟಿ

ಸಿಬಿಐ ದಾಳಿ ಬೆನ್ನಲ್ಲೇ ಡಿಕೆಶಿಗೆ ನಿವಾಸಕ್ಕೆ ನಂಜಾವಧೂತ ಶ್ರೀಗಳು ಭೇಟಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ನಿನ್ನೆ ಸಿಬಿಐ ದಾಳಿ ನಡೆಸಿದೆ. ಈ ವೇಳೆ ಕೆಲವು ದಾಖಲೆಗಳು ಮತ್ತು ನಗದನ್ನು ವಶಪಡಿಸಿಕೊಂಡಿದೆ. ಈ ಬೆನ್ನಲ್ಲೇ ನಂಜಾವಧೂತ ಶ್ರೀಗಳು ಡಿಕೆಶಿ ಮನೆಗೆ ಭೇಟಿ ನೀಡಿದ್ದಾರೆ.

ಯಾವುದೇ ಪಕ್ಷದಲ್ಲಿರುವ ಲಿಂಗಾಯತ ಹಾಗೂ ಬ್ರಾಹ್ಮಣ ವರ್ಗದ ಶಾಸಕರು ಅಥವಾ ರಾಜಕಾರಣಿಗಳಿಗೆ ಸಮಸ್ಯೆ ಎದುರಾದರೆ ಅದನ್ನ ಯಾರಿಗೂ ತಿಳಿಯದಂತೆ ಮರೆಮಾಚಿ ಸಮಸ್ಯೆ ಪರಿಹಾರ ಕಂಡುಕೊಳ್ಳಲಾಗುತ್ತದೆ. ಆದರೆ ಅದೇ ಒಕ್ಕಲಿಗ ಅಥವಾ ಹಿಂದುಳಿದ ಸಮುದಾಯದ ನಾಯಕರುಗಳಾದರೆ ಅವರ ಮೇಲೆ ಸಿಬಿಐ, ಇಡಿ, ಐಟಿ ದಾಳಿಗಳು ಜರುಗುತ್ತವೆ. ಹೀಗಾಗಿ ಈ ಬಗ್ಗೆ ಈ ಸಮುದಾಯದ ಜನ ಎಚ್ಚೆತ್ತುಕೊಳ್ಳಬೇಕು, ನಮ್ಮ ವಿರುದ್ಧ ತಂತ್ರ ಹೆಣೆಯುವವರಿಗೆ ತಕ್ಕ ಪಾಠ ಕಲಿಸಬೇಕು ಎನ್ನುವ ವಿಚಾರವೀಗ ಸಾಮಾಜಿಕ ಜಾಲತಾಣಗಳಲ್ಲಿ, ಆಯಾಯ ಸಮುದಾಯದ ವಿಭಾಗಗಳಲ್ಲಿ ಹರಿದಾಡುತ್ತಿದೆ.

ಈಗ ಇದೇ ವಿಚಾರವನ್ನು ಮುನ್ನೆಲೆಗೆ ತಂದಿರುವ ಒಕ್ಕಲಿಗೆ ಸಮುದಾಯದವರು, ಅಂತರ್ಜಾಲ ಮಾಧ್ಯಮದಲ್ಲಿ ಬೈಎಲೆಕ್ಷನ್ ನಲ್ಲಿ ಬಿಜೆಪಿಗೆ ಪಾಠ ಕಲಿಸಲು ಸಮುದಾಯದವರು ಮುಂದಾಗಬೇಕು, ನಮ್ಮ ನಾಯಕನ ವಿರುದ್ದ ಬಿಜೆಪಿ ಆಡಿರುವ ಆಟಕ್ಕೆ ತಕ್ಕ ಪಾಠ ಕಲಿಸಬೇಕು ಎಂಬ ಕ್ಯಾಂಪೇನ್ ಆರಂಭಿಸಿದ್ದಾರೆ. ಈ ಎಲ್ಲಾ ಬೆಳೆವಣಿಗೆಗಳ ನಡುವೆ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಇಂದು ನಂಜಾವಧೂತ ಶ್ರೀಗಳು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಶ್ರೀಗಳ ದಿಢೀರ್ ಭೇಟಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಈ ಹಿಂದೆ ಸಮುದಾಯದ ವಿಚಾರದಲ್ಲಾದ ರಾಜಕಾರಣ ಬೆಳವಣಿಗೆ ವೇಳೆ ತಮ್ಮ ಸಮುದಾಯದವರನ್ನು ಹಗುರವಾಗಿ ನೋಡಿದರೆ ಅದಕ್ಕೆ ತಕ್ಕ ಉತ್ತರ ಸಿಗುತ್ತದೆ ಎಂಬ ಮಾತನ್ನ ನಂಜಾವಧೂತ ಶ್ರೀಗಳು ಆಡಿದ್ರು. ಈಗ ಅವರು ಮತ್ತೆ ಡಿಕೆಶಿಯವರಿಗೆ ಸಮಸ್ಯೆ ಬಂದಾಗ ಅವರನ್ನು ಭೇಟಿ ಮಾಡಿರುವುದು, ಹಲವು ಲೆಕ್ಕಾಚಾರಗಳಿಗೆ ಮುನ್ನುಡಿಯಾಗಿದೆ. ಡಿಕೆಶಿ ಸಮಸ್ಯೆ ಈಗ ಸಮುದಾಯದ ಪ್ರತಿಷ್ಠೆಯಾಗಿ ಬದಲಾಗುವ ಸಾಧ್ಯತೆ ಇದ್ದು ರಾಜ್ಯದಲ್ಲಿ ಸಾಮುದಾಯಿಕ ಶಕ್ತಿಗಳ ಮುಖಾಮುಖಿಯಾಗುವ ಸಾಧ್ಯತೆಯನ್ನು ಹುಟ್ಟುಹಾಕಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments