ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ47,905 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 86,83,917 ಕ್ಕೆ ಏರಿಕೆಯಾಗಿದೆ.
ಒಟ್ಟಾರೆ ದೇಶದಲ್ಲಿ ಕೊರೋನಾ ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.5.73ರಷ್ಟಿದೆ. ದೇಶದಲ್ಲಿ ಪ್ರಸ್ತುತ 4,89,294 ಸಕ್ರಿಯ ಪ್ರಕರಣಗಳಿವೆ. ನಿನ್ನೆ ಒಂದೇ ದಿನ ದೆಹಲಿಯಲ್ಲಿ 7,830 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಮೊದಲ ಸ್ಥಾನದಲ್ಲಿಯೇ ದೆಹಲಿ ಮುಂದುವರೆದಿದೆ. ನಂತರ ಸ್ಥಾನದಲ್ಲಿರುವ ಕೇರಳದಲ್ಲಿ 6,010 ಪ್ರಕರಣಗಳು ದಾಖಲಾಗಿವೆ. 50,326 ಮಂದಿ ಗುಣಮುಖರಾಗಿದ್ದು, ಕೊರೋನಾದಿಂದ ಚೇತರಿಸಿಕೊಂಡವರ ಸಂಖ್ಯೆ 80 ಲಕ್ಷ ಗಡಿ ದಾಟಿದೆ.
ನಿನ್ನೆ ಒಂದೇ ದಿನ 11,93,358 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,19,62,509 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ತಿಳಿಸಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿಯ ಪ್ರಕಾರ, ದೇಶದಲ್ಲಿ ನಿನ್ನೆ ಒಂದೇ ದಿನ 550 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,28,121 ಕ್ಕೆ ಏರಿಕೆಯಾಗಿದೆ. 80,66,502 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 52,718 ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.