Friday, September 24, 2021
No menu items!
Home Karnataka ಬಿ.ಎಸ್ ಪರಮಶಿವಯ್ಯ ವೀರಶೈವ ಲಿಂಗಾಯಿತ ನಿಗಮದ ನೂತನ ಅಧ್ಯಕ್ಷ

ಬಿ.ಎಸ್ ಪರಮಶಿವಯ್ಯ ವೀರಶೈವ ಲಿಂಗಾಯಿತ ನಿಗಮದ ನೂತನ ಅಧ್ಯಕ್ಷ

ಬೆಂಗಳೂರು: ಮೊನ್ನೆಯಷ್ಟೇ ಅಸ್ತಿತ್ವಕ್ಕೆ ಬಂದಿರುವ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ ಅಧ್ಯಕ್ಷರಾಗಿರುವ ಬಿ.ಎಸ್.ಪರಮಶಿವಯ್ಯ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಸಮುದಾಯದ ಅಭಿವೃದ್ಧಿಗೆ 3 ದಶಕಗಳ ಸೇವೆ ಸಲ್ಲಿಸಿರುವ ಪರಮಶಿವಯ್ಯ ಅವರಿಗೆ ಅಧ್ಯಕ್ಷ ಸ್ಥಾನ ದಕ್ಕಿರುವುದಕ್ಕೆ ಶಾಸಕ ವೀರಣ್ಣ ಚರಂತಿಮಠ ಸಂತಸ ವ್ಯಕ್ತಪಡಿಸಿದ್ದಾರೆ. ಮೊದಲಿಗೆ ಬಾಗಲಕೋಟೆ ಬಿಜೆಪಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಅಧಕ್ಷ ಸ್ಥಾನ ನೀಡಲು ಯಡಿಯೂರಪ್ಪ ಆಸಕ್ತಿ ತೋರಿಸಿದ್ದರು. ಇದನ್ನು ನಯವಾಗಿ ತಿರಸ್ಕರಿದ ಶಾಸಕರು ಪರಮಶಿವಯ್ಯ ಅವರಿಗೆ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ ಮಾಡಿದ್ದರು. ಮಾಡಿದ ಮನವಿಯನ್ನು ಪುರಸ್ಕರಿಸಿ, ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬಿ.ಎಸ್ ಪರಮಶಿವಯ್ಯ ಅವರನ್ನು ಸರ್ಕಾರ ನೇಮಿಸಿದೆ.

ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾಗಿರುವ ಬಿ.ಎಸ್ ಪರಮಶಿವಯ್ಯ ಅವರು, ಸಮುದಾಯದ ಕಲ್ಯಾಣಕ್ಕಾಗಿ ಉಚಿತ ಶಿಕ್ಷಣ, ವಸತಿ ನಿಲಯಗಳನ್ನು ನಡೆಸುತ್ತಿದ್ದಾರೆ. ರಾಜ್ಯದ ವಿವಿದೆಡೆಯಲ್ಲೂ ಶೈಕ್ಷಣಿಕ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ ದೊರಕ್ಕಿದ್ದು ಸಮುದಾಯದ ಅಭಿವೃದ್ಧಿ ಮಾಡುವ ಅವಕಾಶ ಒದಗಿದೆ.

ವಿವಾದಾತ್ಮಕ ಮರಾಠಾ ಪ್ರಾಧಿಕಾರ ರಚನೆಯ ಬೆನ್ನಲ್ಲೇ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ನೇಮಿಸಿವಂತೆ ಒತ್ತಡ ಎದುರಾಗಿತ್ತು. ಇದೀಗ ಸಮಸ್ಯೆ ಬಗೆಹರಿದಿದ್ದು ಬಿ.ಎಸ್ ಪರಮಶಿವಯ್ಯ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ. ಅಲ್ಲದೇ ವೀರಶೈವ – ಲಿಂಗಾಯತ ಸಮುದಾಯದ ಅಭಿವೃದ್ಧಿಗೆ 500 ಕೋಟಿ ರೂಗಳನ್ನೂ ಸರ್ಕಾರ ಮೀಸಲಿಟ್ಟಿದೆ

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments