Tuesday, August 3, 2021
No menu items!
Home Karnataka ದಸರಾ ಖಾಸಗಿ ದರ್ಬಾರ್‌ಗೆ ಮಾಧ್ಯಮ ಮತ್ತು ಸಾರ್ವಜನಿಕರಿಗಿಲ್ಲ ಪ್ರವೇಶ!

ದಸರಾ ಖಾಸಗಿ ದರ್ಬಾರ್‌ಗೆ ಮಾಧ್ಯಮ ಮತ್ತು ಸಾರ್ವಜನಿಕರಿಗಿಲ್ಲ ಪ್ರವೇಶ!

ಮೈಸೂರು: ಇನ್ನೇನು ಕೆಲವೇ ದಿನಗಳಲ್ಲಿ ಜಗದ್ವಿಖ್ಯಾತ ಮೈಸೂರು ದಸರಾ ಆರಂಭವಾಗಲಿದೆ. ಪ್ರತೀ ವರ್ಷವೂ ದಸರಾಕ್ಕೆ ಜನರ ಹಿಂಡೇ ಆಗಮಿಸುತಿತ್ತು. ಆದರೆ ಈ ಬಾರಿ ಕೋರೋನಾ ಹಿನ್ನೆಲೆಯಲ್ಲಿ ದಸರಾ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಇನ್ನು ದಸರಾ ಮತ್ತೊಂದು ಪ್ರಮುಖ ಆಕರ್ಷಣೆ ಖಾಸಗಿ ದರ್ಬಾರ್. ಆದರೆ ಈ ಬಾರಿ ರಾಜವಂಶದ ಖಾಸಗಿ ದರ್ಬಾರ್ ನೋಡಲು ಕಾದು ಕುಳಿತವರಿಗೆ ಭಾರೀ ನಿರಾಸೆಯಾಗಿದೆ. ಇದಕ್ಕೆ ಕಾರಣ ರಾಜಮಾತೆ ಪ್ರಮೋದಾ ದೇವಿ ಹೊರಡಿಸಿರುವ ಪತ್ರಿಕಾ ಪ್ರಕಟಣೆ.

ಹೌದು, ಈ ಬಾರಿಯ ರಾಜ ದರ್ಬಾರ್ ನೋಡಲು ಸಾರ್ವಜನಿಕರು ಹಾಗೂ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಈ ನಿರ್ಬಂಧ ವಿಧಿಸಲಾಗಿದೆ ಎಂದು ರಾಜಮಾತೆ ತಿಳಿಸಿದ್ದಾರೆ.

ಈ ಮೊದಲು ಸಾರ್ವಜನಿಕರಿಗೆ ನಿರ್ಬಂಧವಿದ್ದರೂ ಟಿ.ವಿಗಳ ಮೂಲಕ ಈ ದಸರಾದ ಖಾಸಗಿ ದರ್ಬಾರ್ ಸವಿಯುವ ಅವಕಾಶವಿತ್ತು. ಆದರೆ ಈ ಬಾರಿ ಮಾಧ್ಯಮದವರಿಗೂ ನಿರ್ಬಂಧ ವಿಧಿಸಿರುವ ಕಾರಣ ಸಾರ್ವಜನಿಕರಿಗೆ ಯಾರಿಗೂ ಈ ಅವಕಾಶ ಸಿಗುವುದಿಲ್ಲ. ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಎಲ್ಲರಿಂದ ಸಂಪೂರ್ಣ ಸಹಕಾರ ನಿರೀಕ್ಷಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ಅಲ್ಲದೇ ಉಳಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments