Tuesday, June 15, 2021
No menu items!
Home Bharata ದೀಪಾವಳಿಯಂದು ಅಯೋಧ್ಯೆಯಲ್ಲಿ ಬೆಳಗಲಿದೆ ಐದು ಲಕ್ಷ ಮಣ್ಣಿನ ಅಣತೆ

ದೀಪಾವಳಿಯಂದು ಅಯೋಧ್ಯೆಯಲ್ಲಿ ಬೆಳಗಲಿದೆ ಐದು ಲಕ್ಷ ಮಣ್ಣಿನ ಅಣತೆ

ಲಕ್ನೌ: ಕೊರೊನಾ ವೈರಸ್ ನಿಂದಾಗಿ ಈ ಬಾರಿ ದೀಪಾವಳಿಯನ್ನ ಪರಿಸರ ಸ್ನೇಹಿ ದೀಪಾವಳಿಯನ್ನಾಗಿ ಆಚರಿಸಲು ಎಲ್ಲಾ ಕಡೆ ನಿರ್ಧರಿಸಲಾಗಿದೆ. ಪಟಾಕಿಯನ್ನು ಕೆಲವು ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಬಾರಿ ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬ ವಿಶೇಷವಾಗಿರಲಿದೆ. ರಾಮಜನ್ಮ ಸ್ಥಳ ಸಂಪೂರ್ಣ ದೀಪದ ಬೆಳಕಿನಲ್ಲಿ ಬೆಳಗಲಿದೆ.

ಹೌದು, ಅಯೋಧ್ಯೆಯಲ್ಲಿ 5 ಲಕ್ಷ ಮಣ್ಣಿನ ಹಣತೆಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಸಂಭ್ರಮದ ‘ದೀಪೋತ್ಸವ’ ಆಚರಿಸಲು ಉತ್ತರಪ್ರದೇಶ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸಭೆ ನಡೆಸಿರುವ ಸಿಎಂ ಯೋಗಿ ಆದಿತ್ಯನಾಥ್‌ ಅವರು ಸರಯೂ ನದಿಯ ರಾಮ್‌ ಕೀ ಪೈದಿ ತೀರಗಳಲ್ಲಿ 5.51 ಲಕ್ಷ ಮಣ್ಣಿನ ಹಣತೆಗಳಲ್ಲಿ ದೀಪ ಹಚ್ಚಲು ಸಿದ್ಧತೆ ಮಾಡಿಕೊಳ್ಳುವಂತೆ ಆದೇಶಿಸಿದ್ದಾರೆ.

ದೀಪೋತ್ಸವದ ಬಗ್ಗೆ ಮಾತನಾಡಿರುವ ರಾಜ್ಯ ಪ್ರವಾಸೋದ್ಯಮ ಸಚಿವ ನೀಲಕಂಠ್‌ ತಿವಾರಿ, ”500 ವರ್ಷಗಳಿಂದಲೂ ಇಂಥದ್ದೊಂದು ಸಂಭ್ರಮದ ದೀಪಾವಳಿಗೆ ಕಾಯುತ್ತಿದ್ದೆವು. ನ.12 ರಿಂದ 16ರವರೆಗೆ ಸಂಭ್ರಮದ ದೀಪೋತ್ಸವ ನಡೆಯಲಿದೆ. ಇದರಲ್ಲಿ ಸ್ತಬ್ಧಚಿತ್ರಗಳ ಪ್ರದರ್ಶನ ವಿಶೇಷವಾಗಿದೆ. ಕೊರೊನಾ ಸಂಕಷ್ಟ ಇಲ್ಲದಿದ್ದರೆ ಕೋಟ್ಯಂತರ ರಾಮಭಕ್ತರು ಸೇರಿ ಅಯೋಧ್ಯೆಯಲ್ಲಿ ಸೇರಿಕೊಂಡು ದೀಪಾವಳಿ ನಡೆಸುತ್ತಿದ್ದೆವು. ಆ ಅವಕಾಶ ಸದ್ಯಕ್ಕೆ ಇಲ್ಲದ ಹಿನ್ನೆಲೆಯಲ್ಲಿ ಆನ್‌ಲೈನ್‌ನಲ್ಲಿ ನೇರಪ್ರಸಾರದ ಮೂಲಕ ದೇಶಾದ್ಯಂತ ರಾಮಭಕ್ತರಿಗೆ ರಾಮಜನ್ಮ ಸ್ಥಾನದಲ್ಲಿನ ಸಂಭ್ರಮದ ದೀಪಾವಳಿ ಆಚರಣೆಯನ್ನು ವೀಕ್ಷಿಸಲು ಅನುಕೂಲ ಮಾಡಿಕೊಡಲಿದ್ದೇವೆ ಎಂದಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments