Tuesday, August 3, 2021
No menu items!
Home Bharata ಮಧುರೈ ನಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಪಟಾಕಿ ಕಾರ್ಖಾನೆ, 5 ಸಾವು…

ಮಧುರೈ ನಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಪಟಾಕಿ ಕಾರ್ಖಾನೆ, 5 ಸಾವು…

ತಮಿಳುನಾಡು : ಮಧುರೈ ನ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು , ಮಹಿಳೆಯರು ಸೇರಿದಂತೆ 3 ಮಂದಿ ಸಜೀವ ದಹನವಾಗಿದ್ದಾರೆ ಎಂದು ತಿಳಿದು ಬಂದಿದೆ.

ಪಟಾಕಿ ತಯಾರಿಸುವ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದ್ದು, ಪಟಾಕಿ ತಯಾರು ಮಾಡಲು ಬಳಸುವ ರಾಸಾಯನಿಕದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ . ಘಟನೆಯಲ್ಲಿ 5 ಜನರು ಸಾವನಪ್ಪಿದ್ದು ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಸ್ಫೋಟ ಸಂಭವಿಸದ ಕೂಡಲೇ ಎಚ್ಚೆತ್ತ ಸಿಬ್ಬಂದಿ ದಿಕ್ಕಾಪಾಲಾಗಿ ಓಡಿ ತಪ್ಪಿಸಿಕೊಂಡಿದ್ದಾರೆ .ಆದರೂ ಐವರು ಸಾವನ್ನಪ್ಪಿದ್ದು ಗಾಯಾಳುಗಳನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಸ್ಥಳಕ್ಕೆ ಇದೀಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡಾ ಆಗಮಿಸಿದ್ದು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ದೀಪಾವಳಿ ಹತ್ತಿರುವಿರುವ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದ ಪಟಾಕಿ ತಯಾರಿ ನಡೆಯುತ್ತಿತ್ತು ಎನ್ನಲಾಗಿದ್ದು, ಹೆಚ್ಚಿನ ದಾಸ್ತಾನು ಹೊಂದಿತ್ತು ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಕೆ ಅಧ್ಯಕ್ಷ ಸ್ಟಾಲಿನ್, ಸರ್ಕಾರ ಪಟಾಕಿ ತಯಾರಿಕ ಕಾರ್ಖಾನೆಗಳ ಕುರಿತು ಗಮನಹರಿಸಬೇಕು ಮತ್ತು ಆದಷ್ಟು ಬೇಗ ಮೃತಪಟ್ಟರಿರುವವರಿಗೆ ಮತ್ತು ಗಾಯಾಳುಗಳಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments