Tuesday, October 26, 2021
No menu items!
Home Karnataka ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳ ಮೇಲೆ ಪೊಲೀಸ್ ಫೈರಿಂಗ್….!

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳ ಮೇಲೆ ಪೊಲೀಸ್ ಫೈರಿಂಗ್….!

ಅನೇಕಲ್: ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗ್ಗೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ನಾಲ್ವರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದು, ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡಿನ ದಾಳಿ ನಡೆದಿರುವುದಾಗಿ ವರದಿಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ತಾಲೂಕಿನ ಅವಡದೇವನಹಳ್ಳಿ ಮತ್ತು ಮುತ್ಯನಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್ 30 ಶೆಟ್ಟಿಹಳ್ಳಿಯಲ್ಲಿ ವಿನೀತ್ ಎಂಬಾತನ ಕೊಲೆಯಾಗಿತ್ತು. ಈ ಕೊಲೆಯ ಆರೋಪಿಗಳಾದ ಗೋಪಿ , ಗಂಗಾ , ಅನಂತ ಮತ್ತು ಬಸವ ಎಂಬ ಆರೋಪಿಗಳ ಮೇಲೆ ಈ ದಾಳಿ ನಡೆದಿದೆ.

ಅವಡದೇವನಹಳ್ಳಿಯಲ್ಲಿ ಗೋಪಿ ಮತ್ತು ಗಂಗಾ ಎಂಬಾತನ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದರೆ, ಮುತ್ಯಲೂರಿನಲ್ಲಿ ಅನಂತ ಮತ್ತು ಬಸವ ಎಂಬ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.ಖಚಿತ ಮಾಹಿತಿ ಪಡೆದು ಫೀಲ್ಡ್ಗಿಳಿದ ಪೊಲೀಸರು ಆರೋಪಿಗಳನ್ನ ಶರಣಾಗುವಂತೆ ಸೂಚಿಸಿದ್ದಾರೆ. ಈ ಸಮಯದಲ್ಲಿ ಪೊಲೀಸರ ಮಾತಿಗೆ ಕ್ಯಾರೇ ಎನ್ನದ ಆರೋಪಿಗಳು ಪೇದೆಗಳಾದ ಮಹೇಶ್ ಮತ್ತು ಸುರೇಶ್ ಎಂಬುವವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ.

ಇದೇ ವೇಳೆ ಸ್ಥಳದಲ್ಲಿದ್ದ ಆನೇಕಲ್ ಡಿವೈಎಸ್ಪಿ ಮಹಾದೇವ್ ಮತ್ತು ಆನೇಕಲ್ ಠಾಣೆ ಇನ್ಸ್ಪೆಕ್ಟರ್ ಕೃಷ್ಣ ಅವರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಆರೋಪಿಗಳನ್ನ ಬಂಧಿಸಿದ್ದಾರೆ.

ಇತ್ತ ಮುತ್ಯಾನಲ್ಲೂರಿನಲ್ಲಿ ಆರೋಪಿಗಳಾದ ಬಸವ ಮತ್ತು ಅನಂತ ನಿರುವ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಆರೋಪಿಗಳು ಪಿಸಿ ಗಳಾದ ಇರ್ಫಾನ್ ಮತ್ತು ನಾಗರಾಜ್ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಆರೋಪಿಗಳಿಗೆ ಶರಣಾಗುವಂತೆ ಎಷ್ಟು ಬಾರಿ ಮನವಿ ಮಾಡಿದರೂ ಕೇಳದಿದ್ದಾಗ ಅತ್ತಿಬೆಲೆ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಮತ್ತು ಸರ್ಜಾಪುರ ಠಾಣೆಯ ಸಬ್ ಇನ್ಸ್ಪೆಕ್ಟರ್ ಹರೀಶ್ ಗುಂಡಿನ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments