Tuesday, October 26, 2021
No menu items!
Home Bharata ಪೂನಂಪಾಂಡೆಯನ್ನು ಬಂಧಿಸಿದ ಪೂಲೀಸರು..!

ಪೂನಂಪಾಂಡೆಯನ್ನು ಬಂಧಿಸಿದ ಪೂಲೀಸರು..!

ಪಣಜಿ: ನಿನ್ನೆ ಎಫ್ ಐ ಆರ್ ದಾಖಲಾಗಿದ್ದ ನಟಿ ಪೂನಂ ಪಾಂಡೆಯನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.

ಗೋವಾದ ಚಾಪೋಲಿ ಡ್ಯಾಮ್‌ನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಗೋವಾ ಫಾರ್ವರ್ಡ್ ಪಾರ್ಟಿಯ ಮಹಿಳಾ ಘಟಕ ನಟಿಯ ವಿರುದ್ಧ ದೂರು ದಾಖಲಿಸಿತ್ತು. ನಿನ್ನೆ ಎಫ್ ಐ ಆರ್ ದಾಖಲು ಮಾಡಿ ಇಂದು ಗೋವಾ ಪೊಲೀಸರು ನಟಿಯನ್ನು ಬಂಧಿಸಿದ್ದಾರೆ.

ನಿರ್ಬಂಧಿತ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟ ಕರ್ತವ್ಯ ಲೋಪದಡಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎನ್ನಲಾಗಿದೆ. ಪೂನಂಪಾಂಡೆ ನಟಿಸಿರುವ ಅಶ್ಲೀಲ ವಿಡಿಯೋ ಬಗ್ಗೆ ನಾವು ನಿಮ್ಮ ಗಮನಸೆಳೆಯಲು ಪ್ರಯತ್ನಿಸುತ್ತೇವೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋ ಚಿತ್ರೀಕರಣ ಚಾಪೋಲಿ ಡ್ಯಾಮ್ ಕಾನಕೋಣದಲ್ಲಿ ನಡೆದಿದೆ. ಇದು ತನ್ನ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ಕಾನಕೋಣದ ಜನರಿಗೆ ಆಘಾತವನ್ನು ನೀಡಿದೆ ಎಂದು ಸಂಘವು ದೂರಿನಲ್ಲಿ ವಿವರಿಸಿದೆ.

ಪೂನಂ ಪಾಂಡೆ ಬೆತ್ತಲೆಯಾಗಿರುವ ಒಂದು ನಿಮಿಷದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯರು ಹಾಗೂ ವಿರೋಧ ಪಕ್ಷಗಳು ಗೋವಾ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ನಿರ್ಬಂಧಿತ ಪ್ರದೇಶದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟ ಸರ್ಕಾರದ ವಿರುದ್ಧ ವಿರೋಧ ಪಕ್ಷದವರು ಟೀಕಾಪ್ರಹಾರ ನಡೆಸುತ್ತಿದ್ದಾರೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಮದುವೆಯಾದ ಒಂದು ದಿನದ ನಂತರ ಪೂನಂ ಪಾಂಡೆ ತನ್ನ ಪತಿ ಸ್ಯಾಮ್ ಬಾಂಬೆ ಮೇಲೆ ಅತ್ಯಾಚಾರ ಮತ್ತು ಹಲ್ಲೆ ಆರೋಪ ಮಾಡಿದ್ದರು. ದಕ್ಷಿಣ ಗೋವಾದ ಕಾನಕೋಣ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments