Wednesday, October 27, 2021
No menu items!
Home Bharata ಕೊರೋನಾ ಲಸಿಕೆ ಅಭಿವೃದ್ಧಿ ಮತ್ತು ಹಂಚಿಕೆ ಬಗ್ಗೆ ಮಾಹಿತಿ ಪಡೆದ ಪ್ರಧಾನಿ

ಕೊರೋನಾ ಲಸಿಕೆ ಅಭಿವೃದ್ಧಿ ಮತ್ತು ಹಂಚಿಕೆ ಬಗ್ಗೆ ಮಾಹಿತಿ ಪಡೆದ ಪ್ರಧಾನಿ

ನವದೆಹಲಿ : ಕೊರೋನಾ ವೈರಸ್ ಹಾವಳಿ ನಿಯಂತ್ರಿಸಲು ಹಲವು ಲಸಿಕೆ ತಯಾರಿಕಾ ಕಂಪನಿಗಳು ಲಸಿಕೆ ತಯಾರಿಕೆ ಆರಂಭಿಸಿವೆ. ಮುಂದಿನ ಜನವರಿ ತಿಂಗಳ ಒಳಗಾಗಿ ಲಸಿಕೆ ಕೊಡುವ ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೊರೋನಾ ಲಸಿಕೆಯ ಕಾರ್ಯತಂತ್ರದ ಬಗ್ಗೆ ಪರಿಶೀಲನಾ ಸಭೆ ನಡೆಸಿದ್ದಾರೆ.

ಪ್ರಧಾನಿ ಭಾಗವಹಿಸಿದ್ದ ಪರಶೀಲನಾ ಸಭೆಯಲ್ಲಿ ಕೊರೋನಾ ಸೋಂಕಿತರಿಗೆ ಯಾವ ಮಾನದಂಡದ ಮೇಲೆ ಲಸಿಕೆ ನೀಡಬೇಕು. ಯಾವೆಲ್ಲಾ ನಾಗರೀಕರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಬೇಕು ಎಂದು ಚರ್ಚಿಸಲಾಗಿದೆ. ಅಲ್ಲದೆ ಕೊರೋನಾ ಲಿಸಿಕೆಯ ಅಭಿವೃದ್ಧಿ, ನಿಯಂತ್ರಣ ಮತ್ತು ಅನುಮೋದನೆ ಹಾಗೂ ಸಂಗ್ರಹಣೆಯ ಪ್ರಕ್ರಿಯೆಗಳ ಬಗ್ಗೆಯೂ ಕಾರ್ಯತಂತ್ರ ನಡೆಲಾಗಿದೆ ಎಂದು ಹೇಳಲಾಗಿದೆ.

ಕೊರೋನಾ ಲಸಿಕೆಯ ಹಂಚಿಕೆ ಮತ್ತು ಅಭಿವೃದ್ಧಿ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಪ್ರಧಾನ ಮಂತ್ರಿ ಪ್ರಧಾನ ಕಾರ್ಯದರ್ಶಿಗಳು, ಕ್ಯಾಬಿನೆಟ್ ಕಾರ್ಯದರ್ಶಿಗಳು, ಪ್ರಧಾನ ವೈಜ್ಞಾನಿಕ ಸಲಹೆಗಾರ, ಆರೋಗ್ಯ ಕಾರ್ಯದರ್ಶಿಗಳು, ಡಿಜಿ ಐಸಿಎಂಆರ್, ಪಿಎಂಒ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರದ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ಕೊರೋನಾ ಲಸಿಕೆಗೆ ಅನುಮತಿ ಪಡೆಯಲು ನಿಗದಿತ ಸಮಯದ ಯೋಜನೆ ಹಾಗೂ ಸಮಯಕ್ಕೆ ಸರಿಯಾಗಿ ಲಸಿಕೆಯ ಖರೀದಿ ಮತ್ತು ಲಸಿಕೆ ಲಭ್ಯವಾದ ಬಳಿಕ ಅದರ ವಿತರಣೆಗೆ ಕಾರ್ಯಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಪ್ರಧಾನಿ ಮೋದಿಯವರು ನಿರ್ದೇಶಿಸಿದರು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments