Friday, September 24, 2021
No menu items!
Home Bharata ನ್ಯೂಜಿಲೆಂಡ್ ಸಚಿವೆಯಾಗಿ ಆಯ್ಕೆಯಾದ ಭಾರತದ ಮಹಿಳೆ

ನ್ಯೂಜಿಲೆಂಡ್ ಸಚಿವೆಯಾಗಿ ಆಯ್ಕೆಯಾದ ಭಾರತದ ಮಹಿಳೆ

ದೆಹಲಿ: ನ್ಯೂಜಿಲೆಂಡ್ ನ ಸಚಿವೆಯಾಗಿ ಭಾರತ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ನ್ಯೂಜಿಲೆಂಡ್ನಲ್ಲಿ ಸಚಿವರಾದ ಮೊಟ್ಟ ಮೊದಲ ಭಾರತೀಯೆ ಎಂಬ ಕೀರ್ತಿಗೆ ಪ್ರಿಯಾಂಕಾ ಭಾಜನರಾಗಿದ್ದಾರೆ. ಸಮುದಾಯ ಮತ್ತು ಸ್ವಯಂಪ್ರೇರಿತ ವಲಯ, ವೈವಿಧ್ಯತೆ, ಸೇರ್ಪಡೆ ಮತ್ತು ಜನಾಂಗೀಯ ಸಮುದಾಯಗಳು, ಯುವಕರು ಮತ್ತು ಸಾಮಾಜಿಕ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಸಹ ಸಚಿವರಾಗಿ ಮೂರು ಪ್ರಮುಖ ಖಾತೆಗಳನ್ನು ಅವರಿಗೆ ವಹಿಸಲಾಗಿದೆ.

ನ್ಯೂಜಿಲೆಂಡ್ ನ ಪ್ರಧಾನ ಮಂತ್ರಿಯಾಗಿ ಜಸಿಂದಾ ಆರ್ಡ್ರೆನ್ ಅಧಿಕಾರ ಸ್ವೀಕರಿಸಿದ ಬೆನ್ನಿಗೆ ಅವರ ಸಚಿವ ಸಂಪುಟ ಸಹೋದ್ಯೋಗಿಗಳಾಗಿ ಐವರು ಹೊಸ ಸಚಿವರ ನೇಮಕವಾಗಿದೆ. ಅವರ ಪೈಕಿ ಭಾರತೀಯ ಮೂಲದ ಪ್ರಿಯಾಂಕಾ ರಾಧಾಕೃಷ್ಣನ್ ಒಬ್ಬರು. ಹೊಸ ಸಚಿವ ಸಂಪುಟದ ಮೊದಲ ಸಭೆ ಶುಕ್ರವಾರ ನಡೆಸಲಿದ್ದು, ಅಂದೇ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

41 ವರ್ಷದ ಪ್ರಿಯಾಂಕಾ ಭಾರತದ ಎರ್ನಾಕುಲಂನಲ್ಲಿ ಜನಿಸಿದ್ದು, ಸಿಂಗಾಪುರದಲ್ಲಿ ಶಾಲಾ ಶಿಕ್ಷಣ ಪಡೆದರು. ನ್ಯೂಜಿಲ್ಯಾಂಡ್ಗೆ ತೆರಳಿ ಅಲ್ಲಿ ಉನ್ನತ ಶಿಕ್ಷಣ ಪಡೆದ ಅವರು ಮಹಿಳೆಯರ ಮೇಲಿನ ಕೌಟುಂಬಿಕ ಹಿಂಸಾಚಾರ, ವಲಸೆ ಕಾರ್ಮಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕಾರ್ಯನಿರತರಾಗಿದ್ದರು. 2017ರಲ್ಲಿ ಅವರು ಲೇಬರ್ ಪಾರ್ಟಿ ಮೂಲಕ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿದ್ದರು. 2019ರಲ್ಲಿ ಎಥಿಕ್ಸ್ ಕಮ್ಯೂನಿಟೀಸ್ ಸಚಿವರ ಸಂಸದೀಯ ಖಾಸಗಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments