Wednesday, June 16, 2021
No menu items!
Home Bharata ಸಚಿವೆಯನ್ನ ʻಐಟಂʼ ಎಂದ ಮಾಜಿ ಸಿಎಂ ವಿರುದ್ಧ ಆಕ್ರೋಶ..!

ಸಚಿವೆಯನ್ನ ʻಐಟಂʼ ಎಂದ ಮಾಜಿ ಸಿಎಂ ವಿರುದ್ಧ ಆಕ್ರೋಶ..!

ಭೋಪಾಲ್ : ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ʼಐಟಂʼ ಎಂದು ಕರೆದಿದ್ದು, ಈಗ ಎಲ್ಲೆಡೆ ಆಕ್ರೋಶ ಭುಗಿಲೆದ್ದಿದೆ.

ಕಮಲ್ ನಾಥ್ ಹೇಳಿಕೆಯನ್ನು ಖಂಡಿಸಿ, ಒಂದೆಡೆ ಶಿವರಾಜ್ ಚೌಹಾನ್ ಪ್ರತಿಭಟನೆ ನಡೆಸಿದ್ರೆ. ಇನ್ನೊಂದೆಡೆ ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧ್ಯಾ ಸೇರಿದಂತೆ ಹಲವರು ಇಂದೋರ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ತಾಯಿ ಹಾಗೂ ಸಹೋದರಿಯನ್ನು ಅವಮಾನಿಸುವವರು ಸೈತಾನನಿಗೆ ಸಮಾನ ಎಮಬ ಭಿತ್ತಿ ಪತ್ರ ಹಿಡಿದು ಸಿಂಧ್ಯಾ ಪ್ರತಿಭಟನೆ ನಡೆಸಿದ್ದಾರೆ.

ನಿನ್ನೆ ಉಪಚುನಾವಣಾ ಪ್ರಚಾರದಲ್ಲಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುತ್ತಿದ್ದ ಕಮಲ್ನಾಥ್, ಸುರೇಶ್ ನಮ್ಮ ಅಭ್ಯರ್ಥಿ. ಅತ್ಯಂತ ಸರಳ ವ್ಯಕ್ತಿತ್ವ ಹೊಂದಿರುವವರು. ಆಕೆಯ ಹಾಗೆ ಅಲ್ಲ. ಏನು ಆಕೆಯ ಹೆಸರು? ಎಂದು ಪ್ರಶ್ನಿಸಿದರು. ಅಲ್ಲಿ ನೆರೆದಿದ್ದ ಜನರು ಇಮರ್ತಿದೇವಿ ಎಂದರು. ಆಗ ಕಮಲ್ನಾಥ್, ನನಗಿಂತ ನಿಮಗೇ ಆಕೆಯ ಹೆಸರು ಚಿರಪರಿಚಿತ. ನೀವು ನನಗೆ ಮೊದಲೇ ಎಚ್ಚರಿಸಬೇಕಿತ್ತು. ಏನ್ ಐಟಂ ಇವಳು ಎಂದಿದ್ದರು.

ಇಮರ್ತಿ ದೇವಿ ಕಾಂಗ್ರೆಸ್ನಿಂದ ಗ್ವಾಲಿಯರ್ನ ಡಾಬ್ರಾ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಸದ್ಯ ಶಿವರಾಜ್ ಸಿಂಗ್ ಚೌಹಾಣ್ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆಯಾಗಿದ್ದಾರೆ. ಈಗ ಹಾಲಿ ಕ್ಷೇತ್ರದಿಂದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಈ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಪರವಾಗಿ ಇಂದು ಪ್ರಚಾರ ನಡೆಸಿದ ಕಮಲ್ನಾಥ್ ಇಮರ್ತಿ ದೇವಿಯವರನ್ನು ಲೇವಡಿ ಮಾಡುವ ಮೂಲಕ ಇದೀಗ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments