Saturday, December 4, 2021
No menu items!
Home Karnataka ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್

ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ಪಿಯು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಈಗಾಗಲೇ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ನೂತನ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನವೆಂಬರ್ 20 ರಿಂದ ನೇಮಕಾತಿ ಆದೇಶಗಳನ್ನ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇಂದು ನಡೆದ ಶಿಕ್ಷಣ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂಸು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.ನವೆಂಬರ್ 20ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಂಕೇತಿಕವಾಗಿ ನೇಮಕಾತಿ ಆದೇಶ ನೀಡಲಿದ್ದಾರೆ. ಇನ್ನು ಆದೇಶ ಕಾಲೇಜುಗಳು ಆರಂಭವಾದ ದಿನದಿಂದ ಜಾರಿಗೆ ಬರಲಿದ್ದು, ಅದಕ್ಕೂ ಮೊದಲು ನೂತನ ಉಪನ್ಯಾಸಕರಿಗೆ ಇಲಾಖೆಯ ನಿಯಮಗಳು, ಆಡಳಿತ, ವೃಂದ ಮತ್ತು ನೇಮಕಾತಿ ನಿಯಮಗಳು, ಉಪನ್ಯಾಸಕರ ವೃತ್ತಿ ಧರ್ಮ, ವೃತ್ತಿ ಗೌರವ ಸೇರಿದಂತೆ ಪ್ರೇರಣಾದಾಯಕ ತರಬೇತಿ ಕಾರ್ಯಾಗಾರವನ್ನ ಜಿಲ್ಲೆಗಳಲ್ಲಿ ಇಲ್ಲವೇ ವಿಭಾಗಗಳಲ್ಲಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು. ಇನ್ನು 23ರಿಂದ ಪಿಯು ಉಪನ್ಯಾಸಕರ ವರ್ಗಾವಣಾ ಪ್ರಕ್ರಿಯೆ ಆರಂಭವಾಗಲಿದ್ದು, ಅಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶವಾಗಲಿದೆ ಎಂದರು.

ಈ ಬಾರಿ ಉಪನ್ಯಾಸಕರ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆ ಇರುವುದಿಲ್ಲ. ಮುಂದಿನ ಅಧಿವೇಶನದಲ್ಲಿ ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ವರ್ಗಾವಣಾ ನಿಯಂತ್ರಣ ಕಾಯ್ದೆಗೆ ಸಂಪೂರ್ಣ ತಿದ್ದುಪಡಿ ತಂದು, ಉಪನ್ಯಾಸಕ ಸ್ನೇಹಿಯಾದ ವರ್ಗಾವಣಾ ನೀತಿ ಜಾರಿಗೊಳಿಸಲಾಗುವುದು ಎಂದು ಸುರೇಶ್ ಕುಮಾರ್ ವಿವರಿಸಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments