ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯ ಯುವರತ್ನ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಜೇಮ್ಸ್ ಚಿತ್ರ ಕೂಡ ಸದ್ದು ಮಾಡುತ್ತಿದೆ. ಚೇತನ್ ನಿರ್ದೇಶನದ, ಪವರ್ ಸ್ಟಾರ್ ಅಭಿನಯದ ಈ ಚಿತ್ರಕ್ಕೆ ಫೈಟಿಂಗ್ ಮಾಸ್ಟರ್ ವಿಚಾರ ಬಾರಿ ಸದ್ದು ಮಾಡುತ್ತಿದೆ.
ಹೌದು, ಜೇಮ್ಸ್ ಚಿತ್ರಕ್ಕೆ ದಕ್ಷಿಣ ಕನ್ನಡದ ಖ್ಯಾತ ಸಾಹಸ ನಿರ್ದೇಶಕ ರಾಮ್ ಲಕ್ಷ್ಮಣ್ ನಿರ್ದೇಶನ ಮಾಡುತ್ತಿದ್ದಾರೆ. ಈ ವಿಚಾರವನ್ನ ಜೇಮ್ಸ್ ತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಚೇತನ್ ಫೈಟ್ ಮಾಸ್ಟರ್ ರಾಮ್ ಲಕ್ಷ್ಮಣ್ ಜೊತೆ ತೆಗೆಸಿಕೊಂಡ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ರಾಮ್ ಲಕ್ಷ್ಮಣ್ ಪುನೀತ್ ರಾಜ್ ಕುಮಾರ್ ಅವರ ಯುವರತ್ನ ಸಿನಿಮಾಗೂ ಸಾಹಸ ನಿರ್ದೇಶನ ಮಾಡಿದ್ದಾರೆ. ಇದೀಗ ಜೇಮ್ಸ್ ಗೂ ಅವರೇ ಫೈಟಿಂಗ್ ಡೈರೆಕ್ಟ್ ಮಾಡುತ್ತಿರುವುದು ಚಿತ್ರತಂಡ ಖುಷಿ ಹಂಚಿಕೊಂಡಿದೆ.