Tuesday, October 26, 2021
No menu items!
Home Bharata ಹತ್ರಾಸ್ ಭೇಟಿ ತಡೆದ ಪೊಲೀಸರು: ತಳ್ಳಾಟದ ನಡುವೆ ಕೆಳಗೆ ಬಿದ್ದ ರಾಹುಲ್ ಗಾಂಧಿ…!

ಹತ್ರಾಸ್ ಭೇಟಿ ತಡೆದ ಪೊಲೀಸರು: ತಳ್ಳಾಟದ ನಡುವೆ ಕೆಳಗೆ ಬಿದ್ದ ರಾಹುಲ್ ಗಾಂಧಿ…!

ನವದೆಹಲಿ: ಹತ್ರಾಸ್ ಬಾಲಕಿ ಅತ್ಯಾಚಾರ ಕೇಸ್‌ಗೆ ಸಂಬಂಧಿಸಿದಂತೆ ಇಂದು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಹತ್ರಾಸ್ ಗೆ ಭೇಟಿ ನೀಡಲು ಮುಂದಾಗಿದ್ದರು. ಆದ್ರೆ ಅವರಿಬ್ಬರನ್ನು ಯುಪಿ ಪೊಲೀಸರು ಅರ್ಧದಲ್ಲೆ ತಡೆದಿದ್ದರು. ದಿಲ್ಲಿ-ನೋಯ್ಡಾ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ, ಪಕ್ಷದ ಕಾರ್ಯಕರ್ತರು ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ರಾಹುಲ್ ಗಾಂಧಿಯನ್ನು ಅಡ್ಡಗಟ್ಟಿದ್ದರು. ಈ ವೇಳೆ ನಡೆದ ಲಾಠಿಚಾರ್ಜ್ ಮತ್ತು ತಳ್ಳಾಟದಿಂದಾಗಿ ರಾಹುಲ್ ಗಾಂಧಿ ಮುಗ್ಗರಿಸಿ ಬಿದ್ದಿದ್ದಾರೆ.
ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ರಾಹುಲ್ ಗಾಂಧಿ ಕೂಡ ಯುಪಿ ಪೊಲೀಸರು ನನ್ನನ್ನು ತಳ್ಳಿದ್ದಾರೆ, ನನ್ನ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಆರೋಪ ಹೊರಿಸಿದ್ದಾರೆ. ಪ್ರಿಯಾಂಕ ಗಾಂಧಿ ಕೂಡ ತನ್ನನ್ನೂ ಪೊಲೀಸರು ತಳ್ಳಿರುವುದಾಗಿ ಆರೋಪಿಸಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿದ್ದು, ಪೊಲೀಸರ ಮೇಲೆ ಹರಿಹಾಯ್ದಿದ್ದಾರೆ. ಉತ್ತರಪ್ರದೇಶದ ಪೊಲೀಸ್ ರಾಜ್ಯದಲ್ಲಿ ಸಂಸದ ರಾಹುಲ್ ಗಾಂಧಿ ಮತ್ತು ನಮ್ಮ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ ಅವರೇ ಸುರಕ್ಷಿತರಲ್ಲ ಎಂದ ಮೇಲೆ ಅಲ್ಲಿನ ದಲಿತರು, ಮಹಿಳೆಯರು, ರೈತರು, ಕಾರ್ಮಿಕರು ಹೇಗೆ ಸುರಕ್ಷಿತರಾಗಿರಲು ಸಾಧ್ಯ?  ಸರ್ಕಾರ ಪ್ರಜಾಪ್ರಭುತ್ವಕ್ಕೆ ಕಳಂಕ ಎಂದು ಉತ್ತರ ಪ್ರದೇಶ ಸಿಎಂಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments