Saturday, December 4, 2021
No menu items!
Home Karnataka ರಾಜ್ಯದ ಹಲವೆಡೆ ಇನ್ನೂ 2 ದಿನ ಭಾರೀ ಮಳೆ; ಉಡುಪಿಯಲ್ಲಿ ಮತ್ತೆ 'ಯೆಲ್ಲೋ 'ಅಲರ್ಟ್…!

ರಾಜ್ಯದ ಹಲವೆಡೆ ಇನ್ನೂ 2 ದಿನ ಭಾರೀ ಮಳೆ; ಉಡುಪಿಯಲ್ಲಿ ಮತ್ತೆ ‘ಯೆಲ್ಲೋ ‘ಅಲರ್ಟ್…!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಗಾಳಿಯ ತೀವ್ರತೆ ಕಡಿಮೆಯಾಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಎರಡೂ ದಿನವೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರವಾಳಿ ಭಾಗದಲ್ಲಿ ಮುಂದಿನ ೨ ದಿನ ಭಾರೀ ಮಳೆಯಾಗಲಿದ್ದು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ . ಉತ್ತರ ಕರ್ನಾಟಕದಲ್ಲಿ ಭಾರೀ ಅವಾಂತರ ಸೃಷ್ಟಿಸಿರುವ ವರುಣ ಶುಕ್ರವಾರ ದಿಂದ ಕೊಂಚ ತಣ್ಣಗಾಗಲಿದ್ದಾನೆ ಎಂದು ವರದಿಯಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು 27 ಡಿಗ್ರಿ ಗರಿಷ್ಟ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನು ದಕ್ಷಿಣ ಕನ್ನಡ, ಉಡುಪಿ, ಧಾರವಾಡ , ಹುಬ್ಬಳ್ಳಿ , ಉತ್ತರ ಕನ್ನಡ , ಬೆಳಗಾವಿ , ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು ಸುಮಾರು ರಾಜ್ಯದ 23 ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬುಧವಾರ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹೋಬಳಿ ವ್ಯಾಪ್ತಿಯಲ್ಲಿ ದಾಖಲೆಯ 209 ಮಿ.ಮೀ ನಷ್ಟು ಮಳೆಯಾಗಿರುವ ವರದಿಯಾಗಿದ್ದು, ಕರಾವಳಿಯ ಹಲವು ಕಡೆಗಳಲ್ಲಿ 100 ಮಿ.ಮೀ ನಷ್ಟು ಮಳೆಯಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments