Thursday, August 5, 2021
No menu items!
Home Bharata ರಣವೀರ್ ಕಾರಿಗೆ ಬೈಕ್ ಡಿಕ್ಕಿ : ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರು..!

ರಣವೀರ್ ಕಾರಿಗೆ ಬೈಕ್ ಡಿಕ್ಕಿ : ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರು..!

ಮುಂಬೈ : ಬಾಲಿವುಡ್ ನಟ ರಣವೀರ್ ಸಿಂಗ್ ಮರ್ಸಿಡಿಸ್ ಕಾರಿಗೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮುಂಬೈ ರಸ್ತೆಯಲ್ಲಿ ಹೋಗುವಾಗ ಹಿಂಬದಿಯಿಂದ ಬಂದ ಬೈಕ್ ಸವಾರ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಯಾರಿಗೂ ಏನು ಆಗಿಲ್ಲ ಎನ್ನುವುದೇ ಸಮಾಧಾನಕರ ಸುದ್ದಿಯಾಗಿದೆ.

ಬೈಕ್ ಡಿಕ್ಕಿ ಹೊಡೆದ ತಕ್ಷಣ, ಕಾರು ನಿಲ್ಲಿಸಿ ರಣವೀರ್ ಸಿಂಗ್ ಕೆಳಗಿಳಿದು ನೋಡಿದ್ದಾರೆ. ಅಷ್ಟರಲ್ಲಾಗಲೇ ಸಾಕಷ್ಟು ಜನ ಸೇರಿದ್ದರು. ರಣವೀರ್ ಮಾಸ್ಕ್ ಹಾಕದ ಕಾರಣ ಅಲ್ಲಿ ಎಲ್ಲರಿಗೂ ಗೊತ್ತಾಗಿದೆ. ಆನಂತರ ನಟ, ಬೈಕ್ ಸವಾರನಿಗೆ ಏನಾದರೂ ಆಗಿದೆಯಾ ಎಂಬುದನ್ನು ಪರೀಕ್ಷಿಸಿದ್ದಾರೆ. ಏನು ಆಗಿಲ್ಲ ಎಂಬುದನ್ನು ಖಚಿತ ಪಡಿಸಿಕೊಂಡು ನಿಟ್ಟುಸಿರು ಬಿಟ್ಟಿದ್ದಾರೆ. ಅಷ್ಟೇ ಅಲ್ಲ ತನ್ನ ಕಾರಿಗೇನಾದ್ರೂ ಡ್ಯಾಮೇಜ್ ಆಗಿದೆಯಾ ಎಂದು ಪರೀಕ್ಷಿಸಿಕೊಂಡಿದ್ದಾರೆ. ಯಾರಿಗೂ ಏನು ತೊಂದರೆಯಾಗದೆ ಕೇವಲ ಸಣ್ಣ ಅಪಘಾತವಾಗಿದ್ದು, ಇಬ್ಬರು ಮುನ್ನಡೆದಿದ್ದಾರೆ.

ರಣವೀರ್ ಸದ್ಯ ’83’ ಸಿನಿಮಾ ಮಾಡಿದ್ದು, ಆ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 1983ರಲ್ಲಿ ಭಾರತ ತಂಡ ಕ್ರಿಕೆಟ್ ವಿಶ್ವಕಪ್ ಗೆದ್ದ ಘಟನೆಯನ್ನೇ ಆಧರಿಸಿ ತಯಾರಾದ ಈ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಆದರೆ ಕೊರೊನಾ ವೈರಸ್ ಲಾಕ್ಡೌನ್ನಿಂದಾಗ ’83’ ಬಿಡುಗಡೆ ತಡ ಆಗುತ್ತಲೇ ಇದೆ. ಇದರಲ್ಲಿ ಕಪಿಲ್ ದೇವ್ ಪಾತ್ರವನ್ನು ರಣವೀರ್ ಸಿಂಗ್ ನಿಭಾಯಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments