Saturday, June 19, 2021
No menu items!
Home Karnataka ಕೊಪ್ಪಳ ಜನರಲ್ಲಿ ನಿಲ್ಲದ ಆತಂಕ: ಜಿಲ್ಲೆಯ 6 ಮಂದಿಗೆ ಇಲಿ ಜ್ವರ

ಕೊಪ್ಪಳ ಜನರಲ್ಲಿ ನಿಲ್ಲದ ಆತಂಕ: ಜಿಲ್ಲೆಯ 6 ಮಂದಿಗೆ ಇಲಿ ಜ್ವರ

ಕೊಪ್ಪಳ: 2020 ರಲ್ಲಿ ಇಡೀ ಜಗತ್ತನ್ನೇ ಆಳುತ್ತಿದೆ ಕೊರೊನಾ ಮಹಾಮಾರಿ. ಇದರೊಂದಿಗೆ ಇನ್ನಷ್ಟು ಹೊಸ ವೈರಸ್ ಗಳು ತಲೆದೂರುತ್ತಿವೆ. ಜನ ಸಾಮಾನ್ಯರು ಈ ಮಹಾ ಖಾಯಿಲೆಗೆ ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗ ಕೊಪ್ಪಳದಲ್ಲಿ ಇಲಿ ಜ್ವರ ಶುರುವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿ ಮುಖವಾಗುತ್ತಿರುವುದು ನೆಮ್ಮದಿ ತಂದಿರುವ ಮಧ್ಯೆಯೇ ಇದೀಗ ಕೆಲವು ದಿನಗಳಿಂದ ಇಲಿಜ್ವರಕ್ಕೆ ಸಂಬಂಧಿಸಿದ 6 ಪ್ರಕರಣಗಳು ಪತ್ತೆಯಾಗಿದ್ದು, ಜನತೆಯಲ್ಲಿ ತಲ್ಲಣವನ್ನುಂಟು ಮೂಡಿಸಿದೆ.

ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ 6 ಜನರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಕೊಪ್ಪಳ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಕೊಪ್ಪಳ ತಾಲೂಕಿನ ಹೊಸಳ್ಳಿ, ಬಹದ್ದೂರಬಂಡಿ, ಕೆರೆಹಳ್ಳಿ, ಹೊಸಲಿಂಗಾಪುರ, ನರೇಗಲ್ ಹಾಗೂ ಕುಷ್ಟಗಿ ತಾಲೂಕಿನ ಶಾಖಾಪುರ, ಗ್ರಾಮದಲ್ಲಿ ತಲಾ ಒಬ್ಬರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಇಲಿ ಜ್ವರ ಪ್ರಕರಣಗಳು ಕಾಣಿಸಿಕೊಂಡಿರುವುದರಿಂದ ಸಹಜವಾಗಿಯೇ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೊರೊನಾ ಹೋಯಿತೆಂದು ನೆಮ್ಮದಿಯಿಂದ ಇರುವ ಮೊದಲೇ ಇಲಿ ಜ್ವರ ಕಾಣಿಸಿಕೊಂಡಿರುವುದು ಜನರ ನೆಮ್ಮದಿಯನ್ನೇ ಕಸಿದುಕೊಂಡಿದೆ. ಒಟ್ಟಿನಲ್ಲಿ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಇಲಿಜ್ವರದಿಂದ ದೂರ ಇರಬೇಕಿದೆ.

ಇಲಿ ಜ್ವರ ಹರಡಲು ಸ್ಟ್ರೈರೋ ಕೀಟ ಎಂಬ ಸೂಕ್ಷ್ಮಾಣು ಜೀವಿ ಕಾರಣವಾಗಿದ್ದು, ಸಾಂಕ್ರಾಮಿಕ ರೋಗ ಸೋಂಕು ಹೊಂದಿರುವ ಇಲಿ, ಹೆಗ್ಗಣ, ಬೆಕ್ಕು, ನಾಯಿ ಹಾಗೂ ಇತರ ಕಾಡು ಪ್ರಾಣಿಗಳ ಮೂತ್ರ ವಿಸರ್ಜನೆಯಿಂದ ರೋಗಾಣು ನೀರಿನಲ್ಲಿ ಸೇರಿಕೊಳ್ಳುತ್ತದೆ. ಜೊತೆಗೆ ಚರಂಡಿ ಶುದ್ಧ ಇರದಿರುವುದು ಹಾಗೂ ಮೂತ್ರ ವಿಸರ್ಜನೆಯಂತಹ ನೀರು ಮನುಷ್ಯನ ದೇಹ ಸೇರಿದರೆ ಅಥವಾ ಗಾಯ ಅಥವಾ ಬಾಯಿ, ಮೂಗು, ಕಣ್ಣುಗಳ ಒಳ ಭಾಗದ ಮೂಲಕ ವೈರಸ್ ಕಣಗಳು ದೇಹ ಸೇರಿ ಇಲಿ ಜ್ವರ ಬರುತ್ತದೆ. ಹೀಗಾಗಿ ಜನರು ಜಾಗೃತರಾಗಿರಬೇಕು. ಆದರೆ ಭಯ ಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments