Wednesday, June 16, 2021
No menu items!
Home Latest ರಾಹುಲ್ ದ್ರಾವಿಡ್ ಗರಡಿಯಲ್ಲಿ ಫಿಟ್ ಆಗುತ್ತಿರುವ ರೋಹಿತ್ ಮತ್ತು ಇಶಾಂತ್ ಶರ್ಮಾ

ರಾಹುಲ್ ದ್ರಾವಿಡ್ ಗರಡಿಯಲ್ಲಿ ಫಿಟ್ ಆಗುತ್ತಿರುವ ರೋಹಿತ್ ಮತ್ತು ಇಶಾಂತ್ ಶರ್ಮಾ

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಒಪನರ್ ರೋಹಿತ್ ಶರ್ಮಾ ಮತ್ತು ಹಿರಿಯ ವೇಗಿ ಇಶಾಂತ್ ಶರ್ಮಾ ಬೆಂಗಳೂರಿನ ಎನ್‌ಸಿಎಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.ಮುಖ್ಯ ಆಯ್ಕೆಗಾರ ಸುನೀಲ್ ಜೋಶಿ ಮತ್ತು ಎನ್‌ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರ ಮೇಲ್ವಿಚಾರಣೆಯಲ್ಲಿ ಇವರಿಬ್ಬರೂ ತರಬೇತಿ ಪಡೆಯುತ್ತಿದ್ದು ಮುಂದೆ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಖಾತ್ರಿಯಾಗತೊಡಗಿದೆ.

ಐಪಿಎಲ್‌ ವೇಳೆ ಪಾರ್ಶ್ವವಾಯು ಸೆಳೆತದಿಂದಾಗಿ, ಗಾಯಾಳಾಗಿ ಆಸ್ಟ್ರೇಲಿಯ ಪ್ರವಾಸದ ಏಕದಿನ ಹಾಗೂ ಟಿ20 ಪಂದ್ಯಗಳ ಸರಣಿಯಿಂದ ರೋಹಿತ್‌ ಶರ್ಮ ಬೇರ್ಪಟ್ಟಿದ್ದರು. ಆದರೆ ಐಪಿಎಲ್ ನ ಕೊನೆಯ ಕ್ವಾಲಿಫೈಯರ್ ಮತ್ತು ಫೈನಲ್ ಪಂದ್ಯದಲ್ಲಿ ಅ‍ಡುವ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನ ಮತ್ತೆ ಚಾಂಪಿಯನ್ಸ್ ಪಟ್ಟಕ್ಕೇರಿಸಿದ್ದರು.

ಆಸ್ಟ್ರೇಲಿಯ ವಿರುದ್ಧದ ಕೊನೆಯ 3 ಟೆಸ್ಟ್‌ಗಳಿಂದ ವಿರಾಟ್‌ ಕೊಹ್ಲಿ ಹಿಂದೆ ಸರಿದಿರುವುದರಿಂದ ರೋಹಿತ್‌ ಶರ್ಮ ಅವರ ಫಿಟ್‌ನೆಸ್‌ ಟೀಮ್‌ ಇಂಡಿಯಾ ಪಾಲಿಗೆ ಅತೀ ಅಗತ್ಯವಾಗಿದೆ.ಹೀಗಾಗಿ ಗುರುವಾರದಿಂದ ರೋಹಿತ್‌ ಶರ್ಮ ಲಘು ಅಭ್ಯಾಸದಲ್ಲಿ ತೊಡಗಿದ್ದು, ಅವರಲ್ಲಿ ಯಾವುದೇ ಗಂಭೀರ ಸಮಸ್ಯೆ ಕಂಡುಬಂದಿಲ್ಲ ಎಂದು ಎನ್‌ಸಿಎ ಮೂಲಗಳು ತಿಳಿಸಿವೆ. ಪೂರ್ತಿ ಫಿಟ್‌ನೆಸ್‌ಗೆ ಮರಳಿದ ಬಳಿಕ ಅವರು ಆಸ್ಟ್ರೇಲಿಯಾಗೆ ಪ್ರಯಾಣ ಬೆಳಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದೀಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಗೆ (ಎನ್‌ಸಿಎ) ಆಗಮಿಸಿರುವ ರೋಹಿ’ಟ್’ ಶರ್ಮಾ ಫಿಟ್‌ನೆಸ್‌ ಟ್ರೈನಿಂಗ್‌ ಆರಂಭಿಸಿದ್ದಾರೆ. ಇಶಾಂತ್ ಶರ್ಮಾ ಕೂಡಾ ಎನ್ ಸಿಎ ನಲ್ಲಿ ಅಭ್ಯಾಸ ನಡೆಸುತ್ತಿದ್ದು ಇವರಿಬ್ಬರೂ ಒಂದೇ ಸಲ ಆಸ್ಟ್ರೇಲಿಯಾ ಪ್ರವಾಸ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments