Tuesday, August 3, 2021
No menu items!
Home Karnataka ಆರ್ ಆರ್ ನಗರ, ಶಿರಾ ಮತ ಎಣಿಕೆ: ಮುನಿರತ್ನ ಗೆ ಮುನ್ನಡೆ

ಆರ್ ಆರ್ ನಗರ, ಶಿರಾ ಮತ ಎಣಿಕೆ: ಮುನಿರತ್ನ ಗೆ ಮುನ್ನಡೆ

ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ.

ಮೊದಲ ಹಂತದ ಮತಎಣಿಕೆ ಮುಕ್ತಾಯಗೊಂಡಿದ್ದು, 6164ಕ್ಕೂ ಹೆಚ್ಚು ಮತಗಳನ್ನು ಪಡೆಯುವ ಮೂಲಕ ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಮುನ್ನಡೆ ಸಾಧಿಸಿದ್ದಾರೆ. 2915 ಮತಗಳನ್ನು ಕುಸುಮಾ ಪಡೆದಿದ್ದಾರೆ. ಕೃಷ್ಣಮೂರ್ತಿ 136 ಮತಗಳನ್ನು ಪಡೆದಿದ್ದರು.

ಮೊದಲು ಅಂಚೆ ಮತಗಳ ಎಣಿಕೆ ನಡೆಸಲಾಗಿದ್ದು, ರಾಜರಾಜೇಶ್ವರಿನಗರದ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸಿದ್ದಾರೆ. ಮುನಿರತ್ನ 253, ಕಾಂಗ್ರೆಸ್ ಅಭ್ಯರ್ಥಿ 112 ಹಾಗೂ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 6 ಮತಗಳನ್ನು ಪಡೆದಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಒಟ್ಟು 16 ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಕಣದಲ್ಲಿದ್ದಾರೆ. ಅಭ್ಯರ್ಥಿಗಳಿಗೆ ಮಾತ್ರವಲ್ಲದೇ, ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರಿಗೂ ಪ್ರತಿಷ್ಠೆಯಾಗಿದೆ.

ಮತಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments