Monday, December 6, 2021
No menu items!
Home Karnataka ಬೈ ಎಲೆಕ್ಷನ್ ಅಖಾಡ: ಮಿನಿ ಕುರುಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಬೈ ಎಲೆಕ್ಷನ್ ಅಖಾಡ: ಮಿನಿ ಕುರುಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಬೆಂಗಳೂರು: ಪ್ರತಿಷ್ಟೆಯ ಅಖಾಡವಾಗಿ ಮಾರ್ಪಟ್ಟಿರುವ ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಾಯಂಕಾಲ 6 ಗಂಟೆಗೆ ತೆರೆ ಬೀಳಲಿದೆ.

ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದುದರಿಂದ ಬೈ ಎಲೆಕ್ಷನ್ ಅಖಾಡ ರಂಗೇರಿದೆ. ಕೊನೆಯ ಕ್ಷಣದಲ್ಲಿ ಮತದಾರರನ್ನ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಆರ್ ಆರ್ ನಗರದಲ್ಲಿ ಅಂತಿಮ ಹಂತವಾಗಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ರಾದ ಡಿ.ಕೆ ಶಿವಕುಮಾರ್ ಭರ್ಜರಿ ಪ್ರಚಾರ ನಡೆಸಿ ಅಂತಿಮ ಹಂತದ ಮತಬೇಟೆಯಾಡಲಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರವಂತೂ ಭಾರೀ ಪ್ರತಿಷ್ಟೆಯ ಅಖಾಡವಾಗಿ ಮಾರ್ಪಟ್ಟಿದ್ದು ಡಿಕೆ ಬ್ರದರ್ಸ್ ವರ್ಸಸ್ ಮುನಿರತ್ನ ಎಂದೇ ಬಿಂಬಿತವಾಗಿದೆ. ಕಾಂಗ್ರೆಸ್ ನ ಟ್ರಬಲ್ ಶೂಟರ್, ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ ಪ್ರಥಮ ಚುನಾವಣೆ ಇದಾಗಿದ್ದು , ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನ ಶತಾಯಗತಾಯ ಗೆಲ್ಲಿಸಲೇಬೇಂಕೆಂದು ಪಣ ತೊಟ್ಟಿದ್ದಾರೆ.

ಆಡಾಳಿತಾರೂಢ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರದಲ್ಲಿ ಪಾದರಸದಂತೆ ಸುತ್ತಾಡುತ್ತಾ ಬೈ ಎಲೆಕ್ಷನ್ ಅಭ್ಯರ್ಥಿಗಳ ಪರವಾಗಿ ನಗಾರಿ ಬಾರಿಸುತ್ತಿದ್ದಾರೆ. ಒಟ್ಟಿನಲ್ಲಿ ಪೈಪೋಟಿಯ ಅಖಾಡವಾಗಿರುವ ಮಿನಿ ಕುರುಕ್ಷೇತ್ರದಲ್ಲಿ ಇಂದು ಸಾಯಂಕಾಲ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು ಸಂಜೆ 6 ಗಂಟೆಯ ಬಳಿಕ ಕ್ಷೇತ್ರಕ್ಕೆ ಸಂಬಂಧಪಡದ ವ್ಯಕ್ತಿಗಳು , ರಾಜಕೀಯ ಕಾರ್ಯಕರ್ತರು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಮತದಾರದಲ್ಲದವರು ಕ್ಷೇತ್ರದಲ್ಲಿ ಇರಬಾರದೆಂದು ಚುನಾವಣಾ ಆಯೋಗ ತಿಳಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments