Tuesday, October 26, 2021
No menu items!
Home Karnataka ʻಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ ಪ್ರಚಾರದ ಹುಚ್ಚುʼ

ʻಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ ಪ್ರಚಾರದ ಹುಚ್ಚುʼ

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾರಾ ಮಹೇಶ್ ಕಿಡಿಕಾರಿದ್ದಾರೆ. ನಿನ್ನೆ ತಾನೇ ಹುಣಸೂರು ಶಾಸಕ ಎಚ್.ಪಿ ಮಂಜುನಾಥ್ ಮತ್ತು ಎಂಎಲ್ ಸಿ ರಘು ಆಚಾರ್ ವಾಗ್ದಾಳಿ ನಡೆಸಿದ್ದರು. ಈ ಬೆನ್ನಲ್ಲೆ ಇದೀಗ ಮತ್ತೊಬ್ಬ ಶಾಸಕ ಡಿಸಿ ರೋಹಿಣಿ ಸಿಂಧೂರಿ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಅವರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ರೋಹಿಣಿ ಸಿಂಧೂರಿಗೆ ಪ್ರಚಾರದ ಹುಚ್ಚು. ಅದಕ್ಕಾಗಿಯೇ ಮಹಾರಾಜರಿಗಿಂತ ಮುಂದೆ ನಿಂತು ಪುಷ್ಪಾರ್ಚನೆ ಮಾಡಿದ್ದಾರೆ. ಇದನ್ನು ನೋಡಿ ಶಾಸಕ ಹೆಚ್.ಪಿ.ಮಂಜುನಾಥ್ ರೋಹಿಣಿ ಸಿಂಧೂರಿಯನ್ನು ಮೂರನೇ ಮಹಾರಾಣಿಯಾಗಿ ಮೆರೆಯಬೇಡಿ ಎಂದು ಹೇಳಿದ್ದಾರೆ. ಜಂಬೂಸವಾರಿ ಮೆರವಣಿಗೆ ದಿನ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಲು ಹೋಗಿದ್ದ ರೋಹಿಣಿ ಸಿಂಧೂರಿಯವರನ್ನು ನೋಡಿ ಮಂಜುನಾಥ್ ಆ ರೀತಿ ಹೇಳಿರಬಹುದು ಎಂದು ಶಾಸಕ ಸಾ.ರಾ ಮಹೇಶ್ ತಿಳಿಸಿದರು.

ಶಾಸಕ ಮಂಜುನಾಥ್ ಗೆ ಬರೆದ ಪತ್ರವನ್ನು ಬಹಿರಂಗ ಪಡಿಸಿರುವ ಬಗ್ಗೆಯೂ ಡಿಸಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಸಾ.ರಾ ಮಹೇಶ್, ಇದು ನಿಮಗೆ ಶೋಭೆ ತರುವುದಿಲ್ಲ. ಶಾಸಕರ ಅನುಪಸ್ಥಿತಿಯಲ್ಲಿ ಸಭೆ ನಡೆಸಿದರೆ ಸುಮ್ಮನಿರುವುದಿಲ್ಲ. ಶಾಸಕರನ್ನು ಕಡೆಗಣಿಸಿ ಸಭೆ ನಡೆಸಿದರೆ ಆಗುವ ಪರಿಣಾಮಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಡಳಿತವೆ ಹೊಣೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಮೈಸೂರು ಡಿಸಿ ರೋಹಿಣಿ ಸಿಂಧೂರಿಗೆ ಶಿಷ್ಟಾಚಾರದ ಪಾಠ ಮಾಡಿದ ಶಾಸಕ ಸಾ ರಾ ಮಹೇಶ್. ಕೆಡಿಪಿ ಸಭೆಯಲ್ಲಿ ವೇದಿಕೆ ಮೇಲೆ ಡಿಸಿ ಕುಳಿತು ಕೊಳ್ಳುವಂತಿಲ್ಲ. ಇದು ಪಾಲಿಸುವ ಹಾಗೂ ಇರುವ ಶಿಷ್ಟಾಚಾರ. ಇದೀಗ ಇದರ ಪಾಲನೆ ಆಗ್ತಿಲ್ಲ. ಮುಖ್ಯ ಕಾರ್ಯದರ್ಶಿ ಕೂಡ ಸಚಿವರ ಪಕ್ಕದಲ್ಲಿ ಕುಳಿತುಕೊಳ್ಳುವ ಆಗಿಲ್ಲ. ಇದು ಕೆಡಿಪಿ ಸಭೆಯಲ್ಲಿ ಪಾಲನೆಯಾಗಬೇಕಾದ ಶಿಷ್ಟಾಚಾರ ಎಂದು ಹೇಳಿದರು.

ಮೈಸೂರು ಜಿಲ್ಲೆಯಲ್ಲಿ ರೋಹಿಣಿ ಸಿಂಧೂರಿಯವರ ಆಟ ನಡೆಯುವುದಿಲ್ಲ. ಬೇಕಿದ್ದರೇ ರಾಜಕೀಯಕ್ಕೆ ಬರಲಿ, ಚುನಾವಣೆಗೆ ಸ್ಪರ್ಧಿಸಲಿ. ಮೈಸೂರಿನ ಜನತೆ ಸ್ವಾಭಿಮಾನದಿಂದ ಬದುಕುತ್ತಿರುವವರು. ಸ್ವಾಭಿಮಾನಕ್ಕೆ ಧಕ್ಕೆ ಆದರೆ ಜನರು ಸಹಿಸುವುದಿಲ್ಲ ಎಂದು ಹರಿಹಾಯ್ದಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments