Saturday, December 4, 2021
No menu items!
Home Bharata ಎಸ್ಪಿ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿಗೆ ಪರೋಕ್ಷವಾಗಿ ಬೆಂಬಲ ಘೋಷಿಸಿದ್ದ ಮಾಯಾವತಿ ಇದೀಗ ಹೇಳ್ತಿರೋದೆ ಬೇರೆ..!

ಎಸ್ಪಿ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿಗೆ ಪರೋಕ್ಷವಾಗಿ ಬೆಂಬಲ ಘೋಷಿಸಿದ್ದ ಮಾಯಾವತಿ ಇದೀಗ ಹೇಳ್ತಿರೋದೆ ಬೇರೆ..!

ಲಕ್ನೋ: ಸಮಾಜವಾದಿ ಪಕ್ಷದ ಜತೆಗೆ ಕೈಜೋಡಿಸಲು ಮುಂದಾದ ಏಳು ಮಂದಿ ಬಿಎಸ್ಪಿ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಮುಂಬರುವ ಉತ್ತರ ಪ್ರದೇಶ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಬಿಎಸ್ಪಿ ನಾಯಕಿ ಮಾಯಾವತಿ ಪರೋಕ್ಷವಾಗಿ ತಿಳಿಸಿದ್ದರು. ಆದರೆ ಆ ಹೇಳಿಕೆಗೆ ಇಂದು ಉಲ್ಟಾ ಹೊಡೆದಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿದ ಮಾಯಾವತಿ ಆ ಬಗ್ಗೆ ಮಾತನಾಡಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಕ್ಕಿಂತ ರಾಜಕೀಯದಿಂದ ನಿವೃತ್ತಳಾಗುತ್ತೇನೆ ಎಂದಿದ್ದಾರೆ.

ಬಿಜೆಪಿಯೊಂದಿಗೆ ಬಿಎಸ್ಪಿ ಮೈತ್ರಿ ಭವಿಷ್ಯದ ಯಾವುದೇ ಚುನಾವಣೆಗಳಲ್ಲಿ ಸಾಧ್ಯವಿಲ್ಲ. ಬಿಎಸ್ಪಿಯು ಕೋಮುವಾದಿ ಪಕ್ಷದೊಂದಿಗೆ ಸೇರುವುದಿಲ್ಲ. ನಮ್ಮ ಸಿದ್ಧಾಂತ ‘ಸರ್ವಜನ, ಸರ್ವಧರ್ಮ ಹಿತಾಯ’, ಇದು ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ. ಬಿಎಸ್ಪಿ ಕೋಮು, ಜಾತಿ ಮತ್ತು ಬಂಡವಾಳಶಾಹಿ ಸಿದ್ಧಾಂತವನ್ನು ಹೊಂದಿರುವವರೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಮೇಲ್ಮನೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಬೆಂಬಲಿಸುವ ಅಭ್ಯರ್ಥಿಯ ಸೋಲಾಗುವಂತೆ ಮಾಡುವುದು ಸದ್ಯದ ಗುರಿ, ಎಸ್ಪಿಯ ಎರಡನೇ ಅಭ್ಯರ್ಥಿಯನ್ನು ಸೋಲಿಸಲು ಬಿಜೆಪಿ ಸೇರಿದಂತೆ ಯಾವುದೇ ಪಕ್ಷದ ಅಭ್ಯರ್ಥಿಯನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಹೇಳಿದೆ ಅವರು, ತನ್ನ ಈ ಹಿಂದಿನ ಹೇಳಿಕೆಯನ್ನು ಸಮರ್ಥಿಸಿದರು. ತನ್ನ ಹೇಳಿಕೆಯನ್ನು ರಾಜಕೀಯ ಲಾಭಕ್ಕಾಗಿ ಎಸ್ಪಿ ಮತ್ತು ಕಾಂಗ್ರೆಸ್ ತಿರುಚಿದೆ. ಇದರಿಂದ ಮುಸ್ಲಿಂ ಸಮುದಾಯವು ಪಕ್ಷದಿಂದ ದೂರವಿರುವಂತೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments