Monday, September 27, 2021
No menu items!
Home Latest ನವೆಂಬರ್ 24ರವರೆಗೆ ಸಂಪತ್ ರಾಜ್ ಗೆ ನ್ಯಾಯಾಂಗ ಬಂಧನ..!

ನವೆಂಬರ್ 24ರವರೆಗೆ ಸಂಪತ್ ರಾಜ್ ಗೆ ನ್ಯಾಯಾಂಗ ಬಂಧನ..!

ಬೆಂಗಳೂರು: ಅಖಂಡ ಶ್ರೀನಿವಾಸ್ ಮನೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಗೆ ಇನ್ನೂ 4 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 24ಕ್ಕೆ ಮುಂದೂಡಲಾಗಿ ಅವರನ್ನು ಪರಪ್ಪನ ಅಗ್ರಹಾರಕ್ಕೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

ಆಗಸ್ಟ್ 11ರಂದು ಅಖಂಡ ಶ್ರೀನಿವಾಸಮೂರ್ತಿ ಅವರ ಅಕ್ಕನ ಮಗ ನವೀನ್ ಫೇಸ್ಬುಕ್ನಲ್ಲಿ ಬರೆದ ಕಮೆಂಟ್ ವಿಚಾರವಾಗಿ ಆಗಸ್ಟ್ 11ರಂದು ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಕಾವಲ್ ಬೈರಸಂದ್ರದಲ್ಲಿ ದೊಡ್ಡಮಟ್ಟದಲ್ಲಿ ಗಲಭೆಗಳಾಗಿದ್ದವು. ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಅಖಂಡರ ಮನೆಯನ್ನು ದುಷ್ಕರ್ಮಿಗಳು ಸುಟ್ಟುಹಾಕಿದ್ದರು. ಈ ಘಟನೆಯ ಹಿಂದೆ ಮಾಜಿ ಮೇಯರ್ ಸಂಪತ್ ರಾಜ್ ಅವರ ಕೈವಾಡ ಇರುವ ಗುರುತರ ಆರೋಪ ಇದೆ. ಇವರ ವಿಚಾರಣೆಗೆ ಸಿಸಿಬಿ ಪೊಲೀಸರು ನೋಟೀಸ್ ನೀಡಿದ ಬಳಿಕ ಸಂಪತ್ ರಾಜ್ ಕೊರೋನಾ ಸೋಂಕು ತಗುಲಿದೆ ಎಂದು ಖಾಸಗಿ ಆಸ್ಪತ್ರೆ ಸೇರಿದ್ದರು. ಅಲ್ಲಿಂದ ಅವರು ತಪ್ಪಿಸಿಕೊಂಡು ನಾಗರಹೊಳೆಗೆ ಹೋಗಿ ಅಲ್ಲಿಂದ ತಮಿಳುನಾಡಿನಲ್ಲಿರುವ ತಮ್ಮ ಸಂಬಂಧಿಕರ ಮನೆಗಳಲ್ಲಿ ತಲೆಮರೆಸಿಕೊಂಡಿದ್ದರೆನ್ನಲಾಗಿದೆ.

ಇದೇ ನವೆಂಬರ್ 16ರಂದು ಬೆಂಗಳೂರಿನಲ್ಲಿರುವ ತಮ್ಮ ಮನೆಗೆ ಬಂದಿದ್ದ ಸಂಪತ್ ರಾಜ್ರನ್ನು ಪೊಲೀಸರು ಹಿಡಿದು ಬಂಧಿಸಿದ್ದರು. ಮರುದಿನ ಕೋರ್ಟ್ಗೆ ಅವರನ್ನು ಹಾಜರುಪಡಿಸಲಾಯಿತು. ನ್ಯಾಯಾಲಯ ಎರಡು ದಿನ ಸಿಸಿಬಿ ಕಸ್ಟಡಿಗೆ ಒಪ್ಪಿಸಿತು. ನಂತರ ಮತ್ತೆ ಒಂದು ದಿನ ಕಸ್ಟಡಿ ಅವಧಿ ಮುಂದುವರಿಸಿತು. ಇವತ್ತು ಅವರನ್ನು ನಾಲ್ಕು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದೇ ವೇಳೆ, ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಪತ್ ರಾಜ್ ಅವರನ್ನು ವಿಚಾರಣೆ ನಡೆಸಲು ಅವಕಾಶ ಕೊಡುವಂತೆ ಎನ್ಐಎ ಮಾಡಿದ ಮನವಿಗೆ ಕೋರ್ಟ್ ಸ್ಪಂದಿಸಿದೆ. ಎರಡು ದಿನ ಅವರ ವಿಚಾರಣೆಗೆ ಅನುಮತಿ ನೀಡಿದೆ. ನವೆಂಬರ್ 23 ಮತ್ತು 24ರಂದು ಪರಪ್ಪನ ಅಗ್ರಹಾರ ಜೈಲಿನಲ್ಲೇ ಎನ್ಐಎಯಿಂದ ಸಂಪತ್ ರಾಜ್ ವಿಚಾರಣೆ ನಡೆಯಲಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments