Friday, January 21, 2022
No menu items!
Home Entertainment ( Kan ) ಆಂಗ್ಲೊ ಕ್ಯಾಲೆಂಡರ್ ಅನುಸಾರದ ಶುಭಾಶಯ: ನಟ ದರ್ಶನ್

ಆಂಗ್ಲೊ ಕ್ಯಾಲೆಂಡರ್ ಅನುಸಾರದ ಶುಭಾಶಯ: ನಟ ದರ್ಶನ್

ಬೆಂಗಳೂರು: ಈ ಕೊರೊನಾ ಎಂಬ ಮಹಾಮಾರಿ ಎಲ್ಲರ ಜೀವನವನ್ನು ಉಲ್ಟಾ ಮಾಡಿ ಬಿಟ್ಟಿದೆ. ಕೆಲಸ ಕಳೆದುಕೊಂಡವರೆಷ್ಟೋ, ಉಪವಾಸ ಬಿದ್ದವರೆಷ್ಟೋ, ಸಾವು-ನೋವುಗಳು ಅದೆಷ್ಟೋ ಹೀಗಾಗಿ ಮೊದಲು ಈ ವರ್ಷ ಕಳೆದರು ಸಾಕಪ್ಪ ಅಂತ ಎನ್ನುತ್ತಿದ್ದವರೆ ಎಲ್ಲಾ. ಕೊರೊನಾ ನಡುವೆ ಆಚರಣೆಗೆ ಬ್ರೇಕ್ ಇದ್ದರು, 2020ಅನ್ನು ಬಿಳ್ಕೊಟ್ಟು ಎಲ್ಲರು ಹೊಸ ವರ್ಷಕ್ಕೆ ಸ್ವಾಗತ ಕೋರಿದ್ದಾರೆ. ಈ ಹಿನ್ನೆಲೆ ಎಲ್ಲಾ ಸೆಲೆಬ್ರೆಟಿಗಳು ಕೂಡ ತಮ್ಮ ಅಭಿಮಾನಿಗಳಿಗೆ ಶುಭಾಶಯ ತಿಳಿಸಿದ್ದಾರೆ.

ಆದ್ರೆ ಈ ಮಧ್ಯೆ ನಟ ದರ್ಶನ್ ಮಾಡಿರುವ ಶುಭಾಶಯದ ಟ್ವೀಟ್ ಎಲ್ಲರ ಚಿತ್ತ ಹರಿಸುವಂತೆ ಮಾಡಿದೆ. `ಹೊಸ ವರ್ಷ ಎಂದ ಮೇಲೆ ಏನೋ ಒಂದು ಹೊಸ ಭರವಸೆ ನಮ್ಮಲ್ಲಿ ಇರುತ್ತದೆ. ಹೊಸ ವರ್ಷ ಒಳಿತನ್ನೇ ತರಲಿ ಎಂದು ಆಶಿಸುತ್ತೇನೆ. ಆದಷ್ಟು ಬೇಗ ಈ ಕರೋನ ಮಹಾಮಾರಿ ನಮ್ಮ ಜೀವನದಿಂದ ದೂರವಾಗಲಿ. ಎಲ್ಲರ ಮನೆ ಮನಗಳಲ್ಲಿ ಹೊಸ ವರ್ಷವೂ ಸುಖ ಶಾಂತಿ ನೆಮ್ಮದಿ ನೆಲೆಸುವಂತೆ ಮಾಡಲಿ. ಎಲ್ಲರಿಗೂ ಆಂಗ್ಲೋ ಕ್ಯಾಲೆಂಡರ್ ಅನುಸಾರವಾದ ಹೊಸ ವರ್ಷದ ಹಾರ್ಧಿಕ ಶುಭಾಶಯಗಳುʼ ಎಂದಿದ್ದಾರೆ.

ಹಿಂದೂ ಸಂಪ್ರದಾಯದಲ್ಲಿ ಸಂಕ್ರಾಂತಿ ಹಬ್ಬವನ್ನು ಹೊಸ ವರ್ಷವೆಂದು ಪರಿಗಣಿಸಲಾಗುತ್ತದೆ. ಹೊಸ ಬೆಳೆ ಬರುವ ಕಾರಣ ಅದಕ್ಕೆ ಪೂಜೆ ಮಾಡಿ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತಾರೆ. ಹೀಗಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಹೊಸ ವರ್ಷಕ್ಕೆ ಆಂಗ್ಲ ಕ್ಯಾಲೆಂಡರ್ ಅನುಸಾರದ ಶುಭಾಶಯ ಎಂದು ಕೋರಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments