Saturday, December 4, 2021
No menu items!
Home Bharata ವಾರಣಾಸಿಯಲ್ಲಿ ಪ್ರಧಾನಿಗೆ ಸವಾಲೆಸೆದಿದ್ದ ಮಾಜಿ ಯೋಧನ ಅರ್ಜಿ ವಜಾ..!

ವಾರಣಾಸಿಯಲ್ಲಿ ಪ್ರಧಾನಿಗೆ ಸವಾಲೆಸೆದಿದ್ದ ಮಾಜಿ ಯೋಧನ ಅರ್ಜಿ ವಜಾ..!

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಚುನಾವಣಾ ಕಣದಲ್ಲಿ ಪ್ರತಿಸ್ಪರ್ಧಿಯಾಗಿ ಮಾಜಿ ಯೋಧ ತೇಜ್ ಬಹದ್ದೂರ್ ಸ್ಪರ್ಧಿಸಿದ್ದರು. ಆದರೆ, ಚುನಾವಣಾ ಆಯೋಗ ಅವರ ನಾಮಪತ್ರವನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಆ ತೀರ್ಪು ಹೊರಬಿದ್ದಿದ್ದು, ಚುನಾವಣಾ ಆಯೋಗದ ತೀರ್ಪು ಸರಿಯಾಗಿಯೇ ಇದೆ ಎಂದು ಹೇಳುವ ಮೂಲಕ ಮನವಿಯನ್ನು ತಿರಸ್ಕರಿಸಿದೆ.

ಕಳೆದ ಒಂದು ವರ್ಷದಿಂದ ವಿಚಾರಣೆಯ ಹಂತದಲ್ಲಿದ್ದಈ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಆದರೆ, ಇಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್.ಬೋಪಣ್ಣ ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ತ್ರಿ ಸದಸ್ಯ ನ್ಯಾಯಪೀಠವು ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಸ್ಪಿ-ಬಿಎಸ್ಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಬಿಎಸ್ಪಿ ಯೋಧ ತೇಜ್ ಬಹದ್ದೂರ್ ಸ್ಪರ್ಧಿಸಿದ್ದರು. ಆದರೆ, ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ್ದ ದಾಖಲೆಗಳು ಸಮಪರ್ಕವಾಗಿಲ್ಲದ ಕಾರಣ ನಾಮಪತ್ರ ತಿರಸ್ಕೃತಗೊಂಡಿತ್ತು, ಗಡಿ ಭದ್ರತಾ ಪಡೆಯಿಂದ ನಿರಪೇಕ್ಷಣಾ ಪತ್ರ ಪಡೆದಿರಲಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿತ್ತು.

“ನಾನು ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆ ಕಣಕ್ಕಿಳಿದಿದ್ದೆ. ನಂತರ ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಲಾಗಿತ್ತು. ನನ್ನ ನಾಮಪತ್ರ ತಿರಸ್ಕೃತಗೊಳ್ಳಲು ಸರಿಯಾದ ಕಾರಣ ನೀಡಿಲ್ಲ” ಎಂದು ತೇಜ್ ಬಹದ್ದೂರ್ ದೂರಿದ್ದರು. ಆದರೆ, ಯಾವುದೇ ಸರ್ಕಾರಿ ಸಿಬ್ಬಂದಿಯು ಭ್ರಷ್ಟಾಚಾರ ಹಾಗೂ ಸೈನಿಕರು ವಿಶ್ವಾಸದ್ರೋಹ ಆರೋಪದಡಿ ಸೇವೆಯಿಂದ ಅಮಾನತ್ತಾಗಿದ್ದರೆ ಅಂತಹವರು ಐದು ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಇದೇ ನಿಯಮದಡಿ ತೇಜ್ ಬಹದ್ದೂರ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಆಯೋಗ ಸ್ಪಷ್ಟನೆ ನೀಡಿ ಅಲಹಾಬಾದ್ ಕೋರ್ಟಿಗೂ ದಾಖಲೆ ಒದಗಿಸಿತ್ತು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments