Monday, December 6, 2021
No menu items!
Home Bharata ಶಬರಿಮಲೈ ಭಕ್ತರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

ಶಬರಿಮಲೈ ಭಕ್ತರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

ತಿರುವನಂತಪುರಂ: ಶಬರಿಮಲೈನಲ್ಲಿ ನಡೆಯುವ ಮಂಡಲ-ಮಕರ ಹಾಗೂ ವಿಳಕ್ಕು ವರ್ಷದ ಕಾರ್ಯಕ್ರಮಕ್ಕೆ ತೆರಳುವ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಹಾಗೂ ಸಾರ್ವಜಿನಕರ ಗಮನಕ್ಕೆ ಕೇರಳ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.

ಪ್ರತಿದಿನ 1000 ಯಾತ್ರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ವಾರಾಂತ್ಯದಲ್ಲಿ ಪ್ರತಿ ದಿನ 2000 ಯಾತ್ರಾರ್ಥಿಗಳಿಗೆ ಅವಕಾಶ ಇರುತ್ತದೆ. ಮೊದಲು ನೋಂದಣಿ ಮಾಡಿಕೊಂಡವರಿಗೆ ಮೊದಲ ಆದ್ಯತೆ ಇರುತ್ತದೆ ಎಂದು ಸರ್ಕಾರ ಹೇಳಿದೆ.

ಎಲ್ಲಾ ಯತ್ರಾರ್ಥಿಗಳು https://sabarimalaonline.org/ ವೆಬ್ ಸೈಟ್ ನ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು.

ಶಬರಿಮಲೈಗೆ ಭೇಟಿ ನೀಡುವ 48 ಗಂಟೆ ಅವಧಿಯ ಮೊದಲು ಕೋವಿಡ್-19 ನೆಗೆಟಿವ್ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯ. ಪ್ರವೇಶ ಸ್ಥಳದಲ್ಲಿ Angtigen Test ಅವಕಾಶ ಕಲ್ಪಿಸಲಾಗಿದ್ದು, ಅದರ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸಬೇಕಾಗಿರುತ್ತದೆ. ಹತ್ತು ವರ್ಷಗಳ ಒಳಪಟ್ಟು ಮತ್ತು 60-65 ವರ್ಷಗಳಿಗೆ ಮೇಲ್ಪಟ್ಟವರಿಗೆ ಹಾಗೂ ಅನಾರೋಗ್ಯದ/ ಕಾಯಿಲೆಯ ಲಕ್ಷಣಗಳು ಇರುವಂತಹವರಿಗೆ ಯಾತ್ರಾ ಪ್ರದೇಶಕ್ಕೆ ಅನುಮತಿ ಇರುವುದಿಲ್ಲ.

ಇನ್ನು ಬಿಪಿಇಲ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಇತ್ಯಾದಿ ಕಾರ್ಡ್ ಹೊಂದಿರುವವರು ಯಾತ್ರೆಗೆ ತೆರಳುವ ಸಮಯದಲ್ಲಿ ಅದನ್ನು ಹೊಂದಿರಬೇಕು. ತುಪ್ಪದ ಅಭಿಷೇಕ, ಪಂಪಾ ನದಿ ಸ್ನಾನ, ಸನ್ನಿಧಾನದಲ್ಲಿ ರಾತ್ರಿ ತಂಗುವುದು ಹಾಗೂ ಪಂಪಾ ಮತ್ತು ಗಣಪತಿ ದೇವಸ್ಥಾನ ಅವಕಾಶವಿರುವುದಿಲ್ಲ. ಯಾತ್ರಾರ್ಥಿಗಳು ಎರುವೆಲು ಮತ್ತು ವೇದಸಾರಿಕ್ಕರ ಮಾರ್ಗದಲ್ಲಿ ಮಾತ್ರ ಪ್ರಯಾಣಿಸಬಹುದು ಎಂದು ಅಧಿಕೃತ ಪ್ರಕಟಣೆ ಹೊರಡಿಸಿದೆ.

ಶಬರಿಮಲೈ ದೇವಾಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ನ.16ರಿಂದ ಆರಂಭವಾಗುವ ಹಬ್ಬದ ದಿನಗಳಲ್ಲಿ ಎಲ್ಲಾ ಭಕ್ತರನ್ನು ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ನಿಯಂತ್ರಿಸಲಾಗುತ್ತದೆ ಎಂದು ತಿರುಬಂಕೂರು ದೇವಸ್ವಂ ಮಂಡಳಿ ತಿಳಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments