ನವದೆಹಲಿ: ಬಿಹಾರದಲ್ಲಿ ವಿಧಾನಸಭಾ ಚುನಾವಣಾ ಕಾವು ರಂಗೇರುತ್ತಿದೆ. ಇತ್ತ ರಾಜ್ಯ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಬೆನ್ನಲ್ಲೇ ಲೋಕತಾಂತ್ರಿಕ ಜನತಾ ದಳದ ಮುಖ್ಯಸ್ಥ ಶರದ್ ಯಾದವ್ ಅವರ ಪುತ್ರಿ ಸುಭಾಷಿಣಿ ಯಾದವ್ ಮತ್ತು ಲೋಕತಾಂತ್ರಿಕ ಪಕ್ಷದ ಮುಖಂಡ ಹಾಗೂ ಮಾಜಿ ಸಂಸದ ಕಾಳಿ ಪಾಂಡೆ ಅವರು ಬುಧವಾರ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.
ಕಾಲಿ ಪ್ರಸಾದ್ ಪಾಂಡೆ ಈಗಾಗಲೇ ಕುಚೈಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸುಭಾಷಿನಿ ರಾವ್ ಕೂಡಾ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ
ಬಿಹಾರ ಕಾಂಗ್ರೆಸ್ ಮುಖ್ಯಸ್ಥ ಮದನ್ ಮೋಹನ್ ಝಾ ಮತ್ತು ಎಐಸಿಸಿ ಕಾರ್ಯದರ್ಶಿ (ಬಿಹಾರ) ದೇವೇಂದ್ರ ಯಾದವ್, ಸುಭಾಷಿಣಿ ಮತ್ತು ಕಾಳಿ ಪಾಂಡೆ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.
‘ಇದೇ ಸಮಯದಲ್ಲಿ ಮಾತನಾಡಿದ ಶರದ್ ಯಾದವ್ ಪುತ್ರಿ , ಕಾಂಗ್ರೆಸ್ ಸೇರಲು ಅವಕಾಶ ನೀಡಿದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರಾ ಅವರಿಗೆ ಧನ್ಯವಾದಗಳು ಎಂದು ಸುಭಾಷಿಣಿ ಹೇಳಿದರು
ಬಿಹಾರದಲ್ಲಿ ನವೆಂಬರ್ 3 ಮತ್ತು 7ರಂದು ಎರಡು, ಮೂರನೇ ಹಂತದ ಚುನಾವಣೆ ನಡೆಯಲಿದೆ. ನವೆಂಬರ್ 10ರಂದು ಫಲಿತಾಂಶ ಘೋಷಣೆಯಾಗಲಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ 144 ಸ್ಥಾನಗಳಲ್ಲಿ, ಕಾಂಗ್ರೆಸ್ 70 ಸ್ಥಾನಗಳಲ್ಲಿ, ಎಡಪಕ್ಷ 29 ಕ್ಷೇತ್ರಗಳಲ್ಲಿ ಮಹಾಘಟಬಂಧನ್ ಮೈತ್ರಿಯೊಂದಿಗೆ ಕಣಕ್ಕಿಳಿಯುವುದಾಗಿ ತಿಳಿಸಿವೆ.